-->
 HC Intimation- ವಾರಾಂತ್ಯ ಕರ್ಫ್ಯೂ: ಸಿವಿಲ್ ಜಡ್ಜ್ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

HC Intimation- ವಾರಾಂತ್ಯ ಕರ್ಫ್ಯೂ: ಸಿವಿಲ್ ಜಡ್ಜ್ ಪರೀಕ್ಷೆ ವೇಳಾಪಟ್ಟಿ ಬದಲಾವಣೆ
ವಾರಾಂತ್ಯ ಕರ್ಫ್ಯೂ ಹಿನ್ನೆಲೆ: ಸಿವಿಲ್ ನ್ಯಾಯಾಧೀಶರ ಪ್ರಿಲಿಮಿನರಿ ಪರೀಕ್ಷೆ ವೇಳಾಪಟ್ಟಿ ಬದಲು

ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹೈಕೋರ್ಟ್ ನಡೆಸುತ್ತಿರುವ ಸಿವಿಲ್ ನ್ಯಾಯಾಧೀಶರ ಆಯ್ಕೆಗಾಗಿ ನಡೆಯುತ್ತಿರುವ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಲಾಗಿದೆ.08-08-2021ಕ್ಕೆ ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮಂಗಳವಾರ ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಸಲಾಗುವುದು ಎಂದು ಹೈಕೋರ್ಟ್ ಪ್ರಕಟಣೆ ತಿಳಿಸಿದೆ.


ಪರೀಕ್ಷೆಯ ಕೇಂದ್ರಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.


Ads on article

Advertise in articles 1

advertising articles 2

Advertise under the article