-->
No photo in Govt Advt- HC order | ಸರ್ಕಾರಿ ಯೋಜನೆಗಳ ಜಾಹೀರಾತಿನಲ್ಲಿ ಚುನಾಯಿತರ ಫೋಟೋ ಬೇಡ: ಹೈಕೋರ್ಟ್ ಆದೇಶ

No photo in Govt Advt- HC order | ಸರ್ಕಾರಿ ಯೋಜನೆಗಳ ಜಾಹೀರಾತಿನಲ್ಲಿ ಚುನಾಯಿತರ ಫೋಟೋ ಬೇಡ: ಹೈಕೋರ್ಟ್ ಆದೇಶ

ಸರ್ಕಾರಿ ಯೋಜನೆಗಳ ಜಾಹೀರಾತಿನಲ್ಲಿ ಚುನಾಯಿತರ ಫೋಟೋ ಬೇಡ: ಹೈಕೋರ್ಟ್ ಆದೇಶ







ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಸರ್ಕಾರಿ ಯೋಜನೆಗಳ ಜಾಹೀರಾತಿನಲ್ಲಿ ಜನಪ್ರತಿನಿಧಿಗಳ ಹೆಸರು ಮತ್ತು ಭಾವಚಿತ್ರಗಳನ್ನು ತೆರವುಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ. 


ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರಕಾರ ಈ ಆದೇಶ ಹೊರಡಿಸಿರುವ ಹೈಕೋರ್ಟ್, ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದೆ.


ಸರ್ಕಾರಿ ಖರ್ಚಿನಲ್ಲಿ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ. ಅದು ಜನಪ್ರತಿನಿಧಿಗಳ ವೈಯಕ್ತಿಕ ಹಣವಲ್ಲ. ಇದು ಜನರು ನೀಡಿರುವ ತೆರಿಗೆಯ ಹಣ. ಇದನ್ನು ವೈಯಕ್ತಿಕ ಲಾಭಕ್ಕಾಗಿ ಮತ್ತು ಪುಕ್ಕಟೆ ಜನಪ್ರಿಯತೆಗಾಗಿ ಬಳಸುವುದು ಸರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.


ಸರ್ಕಾರಿ ಯೋಜನೆಗಳಲ್ಲಿ ಅಳವಡಿಸಿದ ಭಾವಚಿತ್ರ ಮತ್ತು ಹೆಸರನ್ನು ತೆಗೆದುಹಾಕುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದರು.


ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ.


ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕ ನೇತೃತ್ವದ ವಿಭಾಗೀಯ ಪೀಠ, ಸಭೆ ನಡೆಸಲಾಗಿದೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರೆ ಸಾಲದು, ಈ ಸಂಬಂಧ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು, ಅದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ ಸರ್ಕಾರಿ ಜಾಹೀರಾತಿನಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವುಗೊಳಿಸುವ ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲೇಖಿಸಿ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200