-->
CBI Arrest - ಸೋಶಿಯಲ್ ಮೀಡಿಯಾದಲ್ಲಿ ನ್ಯಾಯಾಂಗದ ಬಗ್ಗೆ ಕೀಳು ಅಭಿರುಚಿಯ ಪ್ರಕಟಣೆ: ವಿದೇಶದಿಂದ ಸಂಚು, ಆರು ಮಂದಿಯನ್ನು ಬಂಧಿಸಿದ ಸಿಬಿಐ

CBI Arrest - ಸೋಶಿಯಲ್ ಮೀಡಿಯಾದಲ್ಲಿ ನ್ಯಾಯಾಂಗದ ಬಗ್ಗೆ ಕೀಳು ಅಭಿರುಚಿಯ ಪ್ರಕಟಣೆ: ವಿದೇಶದಿಂದ ಸಂಚು, ಆರು ಮಂದಿಯನ್ನು ಬಂಧಿಸಿದ ಸಿಬಿಐ

ಸೋಶಿಯಲ್ ಮೀಡಿಯಾದಲ್ಲಿ ನ್ಯಾಯಾಂಗದ ಬಗ್ಗೆ ಕೀಳು ಅಭಿರುಚಿಯ ಪ್ರಕಟಣೆ: ವಿದೇಶದಿಂದ ಸಂಚು, ಆರು ಮಂದಿಯನ್ನು ಬಂಧಿಸಿದ ಸಿಬಿಐ





ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಂಗದ ಗೌರವಕ್ಕೆ ಚ್ಯುತಿ ತರುವ ಮತ್ತು ಉನ್ನತ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಬಗ್ಗೆ ಕೀಳು ಅಭಿರುಚಿಯ ಸುದ್ದಿಗಳನ್ನು ಪ್ರಕಟಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ಆರು ಮಂದಿಯನ್ನು ಬಂಧಿಸಿದೆ.


ಕಳೆದ ಕೆಲ ವರ್ಷಗಳಿಂದೀಚೆಗೆ ಆಂಧ್ರ ಪ್ರದೇಶ ಹೈಕೋರ್ಟ್ ಕೆಲವು ಮಹತ್ವದ ತೀರ್ಪುಗಳನ್ನು ಪ್ರಕಟಿಸಿದ ಬಳಿಕ ಉನ್ನತ ಹುದ್ದೆಯನ್ನು ಅಲಂಕರಿಸಿದ ಮಾನ್ಯ ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ನ್ಯಾಯಾಂಗ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮತ್ತು ಗೌರವಕ್ಕೆ ಚ್ಯುತಿ ತರುವ , ಕೀಳು ಅಬಿರುಚಿಯ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು.



ಈ ಪ್ರಕರಣವನ್ನು ಪೋಸ್ಟ್ ಮಾಡಿದ ಮತ್ತು ಈ ಕೃತ್ಯದಲ್ಲಿ ಭಾಗಿಯಾದ ಮತ್ತು ಸಹಕಾರ ನೀಡಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ವ್ಯಕ್ತಿಗಳು ವಿದೇಶದಲ್ಲಿ ಇದ್ದುಕೊಂಡು ಈ ಕೃತ್ಯದ ಸಂಚು ನಡೆಸಿದ್ದರು.



ಉಭಯ ದೇಶಗಳ ಪರಸ್ಪರ ಸಹಕಾರ ಒಪ್ಪಂದ ಮತ್ತು ಕಾನೂನು ಪ್ರಕ್ರಿಯೆಯನ್ನು ನಡೆಸಿ ಸಿಬಿಐ ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 16ಕ್ಕೇರಿದೆ.



ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದು, ಎಲ್ಲ ಪ್ರಕರಣಗಳನ್ನು ಸಿಬಿಐ ಏಕಕಾಲಕ್ಕೆ ತನಿಖೆ ನಡೆಸುತ್ತಿದೆ.








Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200