-->
job in Court at Shivamogga- ಶಿವಮೊಗ್ಗ ನ್ಯಾಯಲಯದಲ್ಲಿ ಉದ್ಯೋಗ- SSLC, PUC ಆದವರಿಗೆ ಅವಕಾಶ..

job in Court at Shivamogga- ಶಿವಮೊಗ್ಗ ನ್ಯಾಯಲಯದಲ್ಲಿ ಉದ್ಯೋಗ- SSLC, PUC ಆದವರಿಗೆ ಅವಕಾಶ..

ಶಿವಮೊಗ್ಗ ನ್ಯಾಯಲಯದಲ್ಲಿ ಉದ್ಯೋಗ- SSLC, PUC ಆದವರಿಗೆ ಅವಕಾಶ..






ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.



ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 30, 2022ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.




ಹುದ್ದೆಗಳ ವಿವರ:

ಶೀಘ್ರ ಲಿಪಿಗಾರ - 4 ಹುದ್ದೆಗಳು

ಬೆರಳಚ್ಚುಗಾರರು - 9 ಹುದ್ದೆಗಳು

ಬೆರಳಚ್ಚು ನಕಲುಗಾರರು - 4 ಹುದ್ದೆಗಳು

ಒಟ್ಟು 17 ಹುದ್ದೆಗಳು



ವಿದ್ಯಾರ್ಹತೆ:

ಶೀಘ್ರ ಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.



ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ ಪಾಸ್ ಆಗಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.




ಬೆರಳಚ್ಚುಗಾರ ಹುದ್ದೆಗಳಿಗೆ PUC ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ/ ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಯಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.



ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಪಿಯುಸಿ ಯಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ /ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.



ಹುದ್ದೆಗೆ ನೀಡಲಾಗುವ ವೇತನದ ವಿವರ:

ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)

ಶೀಘ್ರ ಲಿಪಿಗಾರ ರೂ.27,650/- ರಿಂದ 52,650/-ರೂ

ಬೆರಳಚ್ಚುಗಾರ ರೂ.21,400/- ರಿಂದ 42,000/-ರೂ

ಬೆರಳಚ್ಚು ನಕಲುಗಾರ ರೂ.21,400/- ರಿಂದ 42,000/-ರೂ



ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಟ 35 ವರ್ಷ (ವಯೋಮಿತಿ ಸಡಿಲಿಕೆಯ ವಿವರಕ್ಕಾಗಿ ಅಧಿಸೂಚನೆ ನೋಡಿ)


ಆಯ್ಕೆ ವಿಧಾನ:

ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.



ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.




ನಿಗದಿತ ಅರ್ಜಿ ಶುಲ್ಕ:

ಸಾಮಾನ್ಯ ವರ್ಗಕ್ಕೆ 200/-ರೂ ಮತ್ತು ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 100/-ರೂ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ


ಅರ್ಜಿ ಶುಲ್ಕ ಪಾವತಿ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/shivamogga-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಪಾವತಿ ಮಾಡಬಹುದಾಗಿದೆ.

ಇಲ್ಲವೇ,

ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು SBI ಶಾಖೆಗೆ ಜನವರಿ 31,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.



ಇದನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ರೂಪದಲ್ಲಿ ಶುಲ್ಕ ಸ್ವೀಕರಿಸಲಾಗುವುದಿಲ್ಲ.



ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/shivamogga-onlinerecruitment ಗೆ ಭೇಟಿ ನೀಡಿ. ಅರ್ಜಿಯನ್ನು ಭರ್ತಿ ಮಾಡಿ ಜನವರಿ 30, 2022ರೊಳಗೆ ಅರ್ಜಿ ಸಲ್ಲಿಸಬೇಕು.


ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆ

https://districts.ecourts.gov.in/shivamogga-onlinerecruitment












Ads on article

Advertise in articles 1

advertising articles 2

Advertise under the article