-->
Govt Circular on Hijab- ಹಿಜಾಬ್ ತೆಗೆದು ತರಗತಿಗೆ ತೆರಳಲು ಪ್ರತ್ಯೇಕ ಸ್ಥಳ: ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಆದೇಶ

Govt Circular on Hijab- ಹಿಜಾಬ್ ತೆಗೆದು ತರಗತಿಗೆ ತೆರಳಲು ಪ್ರತ್ಯೇಕ ಸ್ಥಳ: ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಆದೇಶ

ಹಿಜಾಬ್ ತೆಗೆದು ತರಗತಿಗೆ ತೆರಳಲು ಪ್ರತ್ಯೇಕ ಸ್ಥಳ: ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಆದೇಶ

ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅದನ್ನು ತೆಗೆದು ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಪ್ರತ್ಯೇಕ ಆವೃತ್ತ ಸ್ಥಳ (Separate Enclosure) ವ್ಯವಸ್ಥೆ ಮಾಡುವಂತೆ ಸೂಚಿಸಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ/ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ.ರಾಜ್ಯ ಸರ್ಕಾರದ ಸಚಿವಾಲಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ (ಪದವಿ ಪೂರ್ವ) ಅಧೀನ ಕಾರ್ಯದರ್ಶಿ ಈ ಸುತ್ತೋಲೆ ಹೊರಡಿಸಿದ್ದಾರೆ.ಹಿಜಾಬ್‌ ಕುರಿತು ಹೈಕೋರ್ಟ್‌ ಮಧ್ಯಂತರ ತೀರ್ಪಿನ ಪ್ರಕಾರ ಹಿಜಬ್‌ ಧರಿಸಿ ಶಾಲಾ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿನಿಯರು ಹಿಜಬ್‌ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ್ತ ಸ್ಥಳ ಕಲ್ಪಿಸಲು ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ/ ಶಿಕ್ಷಣ ಸಂಸ್ಥೆಗಳಿಗೆ ಈ ಸುತ್ತೋಲೆ ಹೊರಡಿಸಲಾಗಿದೆ.ಯಾವುದೇ ಧರ್ಮ ಯಾ ನಂಬಿಕೆಗೆ ಸೇರಿದ ವಿದ್ಯಾರ್ಥಿಗಳು ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್‌, ಧಾರ್ಮಿಕ ಬಾವುಟಗಳನ್ನು ಮುಂದಿನ ಆದೇಶದವರೆಗೆ ತರಗತಿಗೆ ಕೊಂಡೊಯ್ಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶದಲ್ಲಿ ಹೇಳಿತ್ತು.ಅದೇ ರೀತಿ, ಕೋರ್ಟ್ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್‌ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಐಪಿಎಲ್ ಸಲ್ಲಿಸಲಾಗಿದೆ. 

Ads on article

Advertise in articles 1

advertising articles 2

Advertise under the article