-->
treatment for all-  'ಸ್ಥಳೀಯರಲ್ಲ'ದವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ: ಪಂಜಾಬ್ ಹೈಕೋರ್ಟ್

treatment for all- 'ಸ್ಥಳೀಯರಲ್ಲ'ದವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ: ಪಂಜಾಬ್ ಹೈಕೋರ್ಟ್

 'ಸ್ಥಳೀಯರಲ್ಲ'ದವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ: ಪಂಜಾಬ್ ಹೈಕೋರ್ಟ್




ಚಿಕಿತ್ಸೆಗಾಗಿ ಸರ್ಕಾರಿ ಶುಶ್ರೂಷಾಲಯಕ್ಕೆ ಯಾ ಸರ್ಕಾರಿ ಆಸ್ಪತ್ರೆಗೆ ಬರುವ ಯಾವುದೇ ವ್ಯಕ್ತಿಗೆ ಹೊರಗಿನವರು ಎಂಬ ಕಾರಣಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ರೋಗಿಯು ಆತ ಆ ಸರ್ಕಾರಿ ಆಸ್ಪತ್ರೆ ಇರುವ ಪ್ರದೇಶದ ನಿವಾಸಿಯಲ್ಲ ಎಂಬ ಕಾರಣಕ್ಕೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ ಹೇಳಿದೆ.


ಪ್ರಕರಣ: ಆರತಿ ದೇವಿ Vs ಚಂಡೀಗಢ ಕೇಂದ್ರಾಡಳಿತ ಪ್ರದೇಶ ಇತರರು

(ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌)



ವೈದ್ಯರ ಆ ರೀತಿಯ ವರ್ತನೆ ಒಬ್ಬ ವ್ಯಕ್ತಿಯ ಜೀವಿಸುವ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನಿರಾಕರಿಸಿದಂತೆ ಆಗುತ್ತದೆ ಎಂದು ನ್ಯಾ. ರಾಜ್‌ಬೀರ್‌ ಶೆಹ್ರಾವತ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.



ಐದು ತಿಂಗಳ ಗರ್ಭಿಣಿಯೊಬ್ಬರು ಚಂಡೀಗಢದಲ್ಲಿ ವಾಸಿಸುತ್ತಿಲ್ಲ ಮತ್ತು ಪಂಜಾಬ್‌ ನಿವಾಸಿ ಎಂಬ ಕಾರಣಕ್ಕೆ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆ ನಿರಾಕರಿಸಿತ್ತು. ಇದರಿಂದ ನ್ಯಾಯಾಲಯ ಮೆಟ್ಟಿಲೇರಿದ್ದ ಮಹಿಳೆ, ಚಿಕಿತ್ಸೆಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.



ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಬಂದಾಗ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ನೀಡಬೇಕು ಎಂದು ತೀರ್ಪು ನೀಡಿದ ನ್ಯಾಯಾಲಯ, ಸರ್ಕಾರದ ಪರ ವಾದ ಮಂಡಿಸುತ್ತಿರುವ ವಕೀಲರು ಕೂಡಲೇ ಅರ್ಜಿದಾರರನ್ನು ಕರೆದೊಯ್ದು ತುರ್ತಾಗಿ ಅಗತ್ಯ ಚಿಕಿತ್ಸೆ ಒದಗಿಸುವಂತೆ ನೋಡಿಕೊಳ್ಳಲು ತಿಳಿಸಿತು.

Ads on article

Advertise in articles 1

advertising articles 2

Advertise under the article