-->
HC Issue order on Dr Ambedkar Photo- ನ್ಯಾಯಾಲಯದ ಎಲ್ಲ ಕಾರ್ಯಕ್ರಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

HC Issue order on Dr Ambedkar Photo- ನ್ಯಾಯಾಲಯದ ಎಲ್ಲ ಕಾರ್ಯಕ್ರಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

ನ್ಯಾಯಾಲಯದ ಎಲ್ಲ ಕಾರ್ಯಕ್ರಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯರಾಜ್ಯದ ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ ಹಾಗೂ ಗುಲಬರ್ಗಾ ಪೀಠ  ಮತ್ತು ಎಲ್ಲಾ  ಜಿಲ್ಲಾ ಹಾಗೂ ತಾಲ್ಲೂಕಿನ ನ್ಯಾಯಾಲಯಗಳಲ್ಲಿ  ಆಚರಣೆ ಮಾಡುವ ಅಧಿಕೃತ ಕಾರ್ಯಕ್ರಮಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.


ಜನವರಿ 26 ಗಣರಾಜ್ಯೋತ್ಸವ, ಅಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ನವಂಬರ್ 26 ಸಂವಿಧಾನ ದಿನಾಚರಣೆ ಸೇರಿದಂತೆ ನ್ಯಾಯಾಲಯದಲ್ಲಿ ನಡೆಯುವ ಎಲ್ಲ  ಅಧಿಕೃತ ಕಾರ್ಯಕ್ರಮಗಳಲ್ಲಿ  ಡಾ. ಬಿ. ಆರ್. ಅಂಬೇಡ್ಕರ್ ರವರ ಪೋಟೊ ಇಡುವ ಕುರಿತು  ದಿನಾಂಕ 04-02-2022 ರಂದು ನಡೆದ ಪುಲ್ ಕೋರ್ಟ್ ಮೀಟಿಂಗ್ ನಲ್ಲಿ  ನಿರ್ಣಯಿಸಿ ಆದೇಶ ಹೊರಡಿಸಲಾಗಿದೆ.


ಬಗ್ಗೆ ಹೈಕೋರ್ಟ್ ರಿಜಿಸ್ಟಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಅವರು ಸುತ್ತೋಲೆ ಹೊರಡಿಸಿ ಎಲ್ಲಾ ನ್ಯಾಯಾಲಯಗಳು ಇದನ್ನು ಪಾಲಿಸುವಂತೆ ತಾಕೀತು ಮಾಡಿದ್ದಾರೆ.


ಕಳೆದ ಗಣರಾಜ್ಯೋತ್ಸವ ದಿನಾಚರಣೆಯಂದು, ರಾಯಚೂರಿನಲ್ಲಿ ಮಾನ್ಯ ನ್ಯಾಯಾಧೀಶ ಮಲ್ಲಿಕಾರ್ಜುನ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿರುವ ವಿವಾದ ತೀವ್ರ ಸ್ವರೂಪ ಪಡೆದಿರುವ ಸಮಯದಲ್ಲಿ ಹೈಕೋರ್ಟ್ ಹೊರಡಿಸಿರುವ ಸುತ್ತೋಲೆ ಬಹಳ ಮಹತ್ವ ಪಡೆದಿದೆ.


ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಸಂವಿಧಾನ ದಿನಾಚಾರಣೆ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳು ಹಾಗೂ ಕೋರ್ಟ್ ಅಧಿಕೃತ ಕಾರ್ಯಕ್ರಮಗಳಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರಿನ ಹೈಕೋರ್ಟ್, ಕಲ್ಬುರ್ಗಿ ಪೀಠ, ಧಾರವಾಡ ಪೀಠ ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ, ಕರ್ನಾಟಕದ ಎಲ್ಲಾ ಕೋರ್ಟ್ ಗಳಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕೆಂದು ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.

 

 


Ads on article

Advertise in articles 1

advertising articles 2

Advertise under the article