-->
Judge gives birth to boy baby in Govt Hospital- ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನನ: ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ಹಿರಿಯ ಸಿವಿಲ್ ನ್ಯಾಯಾಧೀಶೆ

Judge gives birth to boy baby in Govt Hospital- ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನನ: ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ಹಿರಿಯ ಸಿವಿಲ್ ನ್ಯಾಯಾಧೀಶೆ

ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನನ: ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ಹಿರಿಯ ಸಿವಿಲ್ ನ್ಯಾಯಾಧೀಶೆ






ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರೇ ಎಲ್ಲ.. ಆದರೆ, ಸಮಾಜದಲ್ಲಿ ಉನ್ನತ ಗೌರವದ ಹುದ್ದೆಯಲ್ಲಿ ಇದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮಗುವಿಗೆ ಜನ್ಮ ನೀಡುವ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶರೊಬ್ಬರು ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ.

ಕೆ.ಆರ್. ನಗರದ ಸಿವಿಲ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ ಗಾಯತ್ರಿ ಈ ಮಾದರಿ ನಡೆ ಇಟ್ಟವರು.



ಮೂರು ವರ್ಷಗಳಿಂದ ಕೆಆರ್ ನಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಗಾಯತ್ರಿ ಗರ್ಭಿಣಿ ಆದಾಗಿನಿಂದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ವೈದ್ಯರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.



ಪ್ರಸೂತಿ ತಜ್ಞೆ ಡಾ. ಚಂದ್ರಕಲಾ, ಡಾ. ಭವಾನಿ ಮತ್ತು ಡಾ. ದಿವ್ಯ ಅವರು ನ್ಯಾಯಾಧೀಶರಿಗೆ ಚಿಕಿತ್ಸೆ ನೀಡಿದರು.



ಗಾಯತ್ರಿಯವರು ಸರಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ಈ ಮೂಲಕ ಸರಕಾರಿ ಆಸ್ಪತ್ರೆಗಳಲ್ಲಿ ಸಿಗುವ ಚಿಕಿತ್ಸಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರಿದ್ದಾರೆ.


ಸರಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ ಎಂದು ಟೀಕಿಸುವ ಜನರಿಗೆ ಇಲ್ಲೂ ಉತ್ತಮ ಚಿಕಿತ್ಸೆ ದೊರೆಯುತ್ತದೆ ಎಂಬ ಸಂದೇಶವನ್ನು ಅವರು ಈ ಮೂಲಕ ಸಾರಿದ್ದಾರೆ.

Ads on article

Advertise in articles 1

advertising articles 2

Advertise under the article