-->
Protest restriction in Bangaluru- ಫ್ರೀಡಂ ಪಾರ್ಕ್ ಬಿಟ್ಟರೆ ಬೆಂಗಳೂರಲ್ಲಿ ಬೇರೆಲ್ಲೂ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ: ಹೈಕೋರ್ಟ್‌

Protest restriction in Bangaluru- ಫ್ರೀಡಂ ಪಾರ್ಕ್ ಬಿಟ್ಟರೆ ಬೆಂಗಳೂರಲ್ಲಿ ಬೇರೆಲ್ಲೂ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ: ಹೈಕೋರ್ಟ್‌

ಫ್ರೀಡಂ ಪಾರ್ಕ್ ಬಿಟ್ಟರೆ ಬೆಂಗಳೂರಲ್ಲಿ ಬೇರೆಲ್ಲೂ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ: ಹೈಕೋರ್ಟ್‌





ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಬೇರೆಲ್ಲೂ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ರಾಜ್ಯ ಸರ್ಕಾರ ಖಾತ್ರಿ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಕಟ್ಟುನಿಟ್ಟಿನ ಆದೇಶ ಮಾಡಿದೆ.




ಮೆರವಣಿಗೆ, ಪ್ರತಿಭಟನೆಯಿಂದ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ, ಈಗ ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್‌ ಕುಮಾರ್‌, ಆಗಿನ ಸಿಜೆಯವರಿಗೆ ಬರೆದಿದ್ದ ಪತ್ರವನ್ನು ಸ್ವಯಂಪ್ರೇರಿತ ಪಿಐಎಲ್ ಆಗಿ ಪರಿಗಣಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಸಿಜೆ ರಿತುರಾಜ್‌ ಅವಸ್ಥಿ ಮತ್ತು ನ್ಯಾ. ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ವಿಭಾಗೀಯ ಪೀಠ ನಡೆಸಿತು.



ಫ್ರೀಡಂ ಪಾರ್ಕ್‌ನಲ್ಲಿ ಸಂಘಟಿತ ಪ್ರತಿಭಟನೆ, ಧರಣಿ, ಸಭೆ ನಡೆಸಲು ಸರ್ಕಾರ ಅನುವು ಮಾಡಬೇಕು. ಈ ಮೂಲಕ ಸಂಚಾರ ದಟ್ಟಣೆ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದು ವೇಳೆ, ಸಂಚಾರ ದಟ್ಟಣೆ ಆಗುವುದಾದರೆ ತಕ್ಷಣ ಅಂತಹ ಚಟುವಟಿಕೆಗೆ ನಿರ್ಬಂಧ ವಿಧಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.



'ಪ್ರತಿಭಟನೆ, ಹೋರಾಟ, ಸಭೆ ಇತ್ಯಾದಿ ಚಟುವಟಿಕೆ ಸಂಬಂಧ ರಾಜ್ಯ ಸರ್ಕಾರವು ಇ-ಗೆಜೆಟ್ ನಿಯಮಗಳನ್ನು ಸಲ್ಲಿಸಿದೆ. ಇದರ ಅಡಿ ರಾಜ್ಯ ಪೊಲೀಸ್‌ ಆಕ್ಟ್‌ನ ಸೆಕ್ಷನ್‌ 103 ಮತ್ತು IPC ಸೆಕ್ಷನ್‌ 188ರಡಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್‌ ಇನ್‌ಸ್ಪೆಕ್ಟರ್‌ ಕ್ರಮಕೈಗೊಳ್ಳಬಹುದು' ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.



ಫ್ರೀಡಂ ಪಾರ್ಕ್‌ಗೆ ಹೋಗಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಲಿ. ರಸ್ತೆಯಲ್ಲಿ ಪ್ರತಿಭಟನೆ, ಧರಣಿ ಮಾಡದಂತೆ ರಾಜ್ಯ ಸರ್ಕಾರ ಖಾತ್ರಿವಹಿಸಬೇಕು. ಎಲ್ಲವನ್ನೂ ನಿಷೇಧಿಸಿ. ನಿಯಮಗಳ ಜಾರಿಗೆ ರಾಜ್ಯ ಸರ್ಕಾರ ಏನು ಮಾಡಿದೆ?” ಎಂದು ಸಿಜೆ ಸರ್ಕಾರವನ್ನು ಪ್ರಶ್ನಿಸಿದರು.



'ಕರ್ನಾಟಕ ಪೊಲೀಸ್‌ ಆಕ್ಟ್‌ನ ಸೆಕ್ಷನ್‌ 31(1)(ಒ) ಅಡಿ ಪ್ರತಿಭಟನೆ, ಹೋರಾಟ, ಧರಣಿಗೆ ನಿರ್ಬಂಧ ವಿಧಿಸಲು ನಗರ ಪೊಲೀಸ್‌ ಆಯುಕ್ತರಿಗೆ ಅಧಿಕಾರವಿದೆ' ಎಂದು ಸರ್ಕಾರಿ ವಕೀಲರು ಹೇಳಿದರು. ಆ ಬಳಿಕ ಪೀಠ ಆದೇಶ ಮಾಡಿ, ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿತು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200