-->
Sec 143 A of NI Act - ಚೆಕ್ ಅಮಾನ್ಯ ಪ್ರಕರಣ: ಮಧ್ಯಂತರ ಪರಿಹಾರದ ಆದೇಶ ಕಡ್ಡಾಯವಲ್ಲ- ಕರ್ನಾಟಕ ಹೈಕೋರ್ಟ್

Sec 143 A of NI Act - ಚೆಕ್ ಅಮಾನ್ಯ ಪ್ರಕರಣ: ಮಧ್ಯಂತರ ಪರಿಹಾರದ ಆದೇಶ ಕಡ್ಡಾಯವಲ್ಲ- ಕರ್ನಾಟಕ ಹೈಕೋರ್ಟ್

Sec 143 A of NI Act - ಚೆಕ್ ಅಮಾನ್ಯ ಪ್ರಕರಣ: ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ- ಕರ್ನಾಟಕ ಹೈಕೋರ್ಟ್

NI ಆಕ್ಟ್‌ ಸೆಕ್ಷನ್ 138ನಡಿ ಹಾಕಲಾಗುವ ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತೀರ್ಪು ನೀಡಿದೆ.ಪ್ರಕರಣ: ವಿಜಯ್ Vs ಶೇಖರಪ್ಪ (ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ- 17-02-2022)

Criminal Petition: 100261/2022


ಚೆಕ್‌ ಅಮಾನ್ಯ ಪ್ರಕರಣದಲ್ಲಿ ಸಾಲ ಪಡೆದ ಮೊತ್ತದ ಪೈಕಿ ಶೇ 20ರಷ್ಟು ಹಣವನ್ನು ಮಧ್ಯಂತರ ಪರಿಹಾರ ಪಾವತಿಸಲು ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.ಮಧ್ಯಂತರ ಪರಿಹಾರ ಪಾವತಿಸುವಂತೆ ಆದೇಶಿಸುವ ವಿವೇಚನಾಧಿಕಾರವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಇದೆ. ಆದರೆ, ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವೇನಲ್ಲ. ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸಿದರೆ, ಅದಕ್ಕೆ ಸೂಕ್ತ ಕಾರಣಗಳನ್ನು ಆದೇಶದಲ್ಲಿ ನೀಡಬೇಕು ಎಂದು ಪೀಠ ತೀರ್ಪಿನಲ್ಲಿ ತಿಳಿಸಿದೆ.
"ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಆರೋಪಿಯನ್ನು ಸಾಲ ಮರು ಪಾವತಿಗೆ ಹೊಣೆಗಾರರನ್ನಾಗಿ ಮಾಡಿಲ್ಲ. ಹೀಗಿದ್ದರೂ ದೂರುದಾರ ಶೇಖರಪ್ಪ ಅವರಿಂದ ಪಡೆದ 2 ಕೋಟಿ ರೂಪಾಯಿ ಸಾಲದಲ್ಲಿ ಶೇ 20ರಷ್ಟು ಹಣವನ್ನು ಮಧ್ಯಂತರ ಪರಿಹಾರವಾಗಿ ಪಾವತಿ ಮಾಡಬೇಕು" ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಆದರೆ, ಈ ಆದೇಶಕ್ಕೆ ಸಕಾರಣಗಳನ್ನು ಉಲ್ಲೇಖಿಸಿರಲಿಲ್ಲ.ಸದ್ರಿ ಪ್ರಕರಣದಲ್ಲಿ ಕೋರ್ಟ್ ಆದೇಶದ ಮೇರೆಗೆ ದೂರುದಾರ ಶೇಖರಪ್ಪ ಅವರಿಗೆ 40 ಲಕ್ಷ ರೂಪಾಯಿ ಮಧ್ಯಂತರ ಪರಿಹಾರವಾಗಿ ಪಾವತಿಸದ್ದಕ್ಕೆ ಆರೋಪಿ ವಿಜಯಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಆಸ್ತಿ ಹರಾಜಿಗೆ ಹೊರಡಿಸಲಾದ ಸಾರ್ವಜನಿಕ ಪ್ರಕಟಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.


ಆರೋಪಿ ಪರ ಸಲ್ಲಿಸಿರುವ ರಿವ್ಯೂ ಅರ್ಜಿಯನ್ನು ಕ್ಷಿಪ್ರವಾಗಿ ಇತ್ಯರ್ಥಪಡಿಸುವಂತೆ ಕೊಪ್ಪಳ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹೈಕೋರ್ಟ್ ಇದೇ ವೇಳೆ ಆದೇಶಿಸಿದೆ. ಅಲ್ಲಿಯವರೆಗೆ 40 ಲಕ್ಷ ರೂಪಾಯಿಯನ್ನು ಮಧ್ಯಂತರ ಪರಿಹಾರವಾಗಿ ಪಾವತಿಸಲು ವಿಜಯಾಗೆ ನಿರ್ದೇಶಿಸಿ JMFC ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

Ads on article

Advertise in articles 1

advertising articles 2

Advertise under the article