-->
ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಇದೀಗ ಮಾರ್ಗಸೂಚಿ ಕುರಿತು ಮತ್ತೊಂದು ಪ್ರಕಟಣೆ ಹೊರಡಿಸಿದೆ.2022-23ನೇ ಸಾಲಿಗೆ ಗ್ರೂಪ್ ಎ.ಬಿ.ಸಿ. ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಈ ಆದೇಶ ಹೊರಡಿಸಿದೆ.ಮೇ 1 ರಿಂದ ಮೇ 15 ರ ಒಳಗೆ ಸಾರ್ವಜನಿಕ ವರ್ಗಾವಣೆ ಮುಗಿಸಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವರ್ಗಾವಣೆ ಕೈಗೊಳ್ಳಲು ಸಂಬಂಧ ಪಟ್ಟ ಸಚಿವರಿಗೆ ಅಧಿಕಾರ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಈ ಅಧಿಸೂಚನೆ ಹೊರಡಿಸಿದ್ದಾರೆ.ಎಲ್ಲಾ ಇಲಾಖೆಯ ಎ.ಬಿ.ಸಿ ಮತ್ತು ಡಿ ವರ್ಗದ ಅಧಿಕಾರಿಗಳು ಹಾಗೂ ನೌಕರರಿಗೆ ಅನ್ವಯವಾಗುವಂತೆ ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರಬಾರದುವ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.ಈ ಮೊದಲು ಮೇ ಮತ್ತು ಜೂನ್ ತಿಂಗಳಲ್ಲಿ ಶೇ.4-5 ರಷ್ಟು ನೌಕರರ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. 2020-21ನೇ ಸಾಲಿನಿಂದ ಶೇ.6 ರಷ್ಟು ಮೀರದಂತೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.(ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಸೇನೌಬ 2022 ಬೆಂಗಳೂರು ದಿನಾಂಕ 30-04-2022)

(ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌಬ 2013 ಬೆಂಗಳೂರು ದಿನಾಂಕ 07-06-2013)

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200