-->
Ktk HC on Adoption of Elephant - ವಾಣಿಜ್ಯೇತರ ಕಾರ್ಯಕ್ಕೆ ಆನೆಗಳನ್ನು ದತ್ತು ಪಡೆಯಬಹುದು: ಕರ್ನಾಟಕ ಹೈಕೋರ್ಟ್‌

Ktk HC on Adoption of Elephant - ವಾಣಿಜ್ಯೇತರ ಕಾರ್ಯಕ್ಕೆ ಆನೆಗಳನ್ನು ದತ್ತು ಪಡೆಯಬಹುದು: ಕರ್ನಾಟಕ ಹೈಕೋರ್ಟ್‌

ವಾಣಿಜ್ಯೇತರ ಕಾರ್ಯಕ್ಕೆ ಆನೆಗಳನ್ನು ದತ್ತು ಪಡೆಯಬಹುದು: ಕರ್ನಾಟಕ ಹೈಕೋರ್ಟ್‌





ಖಾಸಗಿ ಮಾಲಕತ್ವದಲ್ಲಿರುವ ಆನೆಗಳನ್ನು ವಾಣಿಜ್ಯ ಉದ್ದೇಶಗಳಿಗೆ ಹೊರತುಪಡಿಸಿದ ಚಟುವಟಿಕೆಗಳಿಗೆ ಯಾ ಕಾರ್ಯಕ್ಕೆ ಬಳಸಲು ದತ್ತು ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.



ಗುಜರಾತ್ ಮೂಲದ ರಾಧಾಕೃಷ್ಣ ದೇವಾಲಯ ಟ್ರಸ್ಟ್‌ಗೆ ಕರ್ನಾಟಕದಿಂದ ನಾಲ್ಕು ಆನೆಗಳನ್ನು ದತ್ತು ನೀಡಲಾಗಿತ್ತು. ಈ ದತ್ತು ಪ್ರಕ್ರಿಯೆಯನ್ನು ಆಕ್ಷೇಪಿಸಿ ಎಂ ಎಸ್ ಮುರಳಿ ಎಂಬವರು ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 



ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.



ವನ್ಯಜೀವಿ ಸಂರಕ್ಷಣಾ ಕಾಯ್ದೆ ಸಾವಿರ 1972 ಕಲಂ 40 ಅಡಿ ವಾಣಿಜ್ಯ ಉದ್ದೇಶಗಳನ್ನು ಹೊರತುಪಡಿಸಿ ಉಳಿದ ಸ್ವರೂಪದ ಚಟುವಟಿಕೆಗಳಿಗೆ ಜೀವಂತ ಆನೆಗಳನ್ನು ದತ್ತು ಪಡೆಯುವುದಕ್ಕೆ ಯಾವುದೇ ನಿರ್ಬಂಧ ಅಥವಾ ಅಡೆತಡೆ ಇಲ್ಲ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200