-->
ಕೌಟುಂಬಿಕ ವ್ಯಾಜ್ಯ: ಜೀವನಾಂಶ ಅರ್ಜಿ 6 ತಿಂಗಳಲ್ಲಿ ಇತ್ಯರ್ಥಕ್ಕೆ ಹೈಕೋರ್ಟ್ ಆದೇಶ

ಕೌಟುಂಬಿಕ ವ್ಯಾಜ್ಯ: ಜೀವನಾಂಶ ಅರ್ಜಿ 6 ತಿಂಗಳಲ್ಲಿ ಇತ್ಯರ್ಥಕ್ಕೆ ಹೈಕೋರ್ಟ್ ಆದೇಶ

ಕೌಟುಂಬಿಕ ವ್ಯಾಜ್ಯ: ಜೀವನಾಂಶ ಅರ್ಜಿ 6 ತಿಂಗಳಲ್ಲಿ ಇತ್ಯರ್ಥಕ್ಕೆ ಹೈಕೋರ್ಟ್ ಆದೇಶ


* ಮಹಿಳೆಯರ ಜೀವನಾಂಶ ಅರ್ಜಿ ಇತ್ಯರ್ಥಕ್ಕೆ 6 ತಿಂಗಳ ಗಡುವು

* ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್‌ ಸೂಚನೆ

* ಎಚ್‌. ರಾಜಮ್ಮ ಪ್ರಕರಣದಲ್ಲಿ ಮಹತ್ವದ ಆದೇಶ ನೀಡಿದ ಹೈಕೋರ್ಟ್





ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆಯ ಸೆಕ್ಷನ್‌ 12ರಡಿ ಜೀವನಾಂಶ ಕೋರಿ ಮಹಿಳೆಯರು ಸಲ್ಲಿಸುವ ಅರ್ಜಿಗಳನ್ನು ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಗರಿಷ್ಠ ಆರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.



ತಾವು ಸಲ್ಲಿಸಿರುವ 'ಜೀವನಾಂಶ ಕೋರಿ' ಅರ್ಜಿಯನ್ನು ಇತ್ಯರ್ಥಪಡಿಸಲು ಬೆಂಗಳೂರಿನ 3ನೇ ಮೆಟ್ರೋಪಾಲಿಟನ್‌ ಮ್ಯಾಜಿಸ್ಪ್ರೇಟ್‌ ಟ್ರಾಫಿಕ್‌ ಕೋರ್ಟ್ ವಿಳಂಬ ಮಾಡುತ್ತಿದೆ ಎಂದು ಎಚ್‌. ರಾಜಮ್ಮ ಎಂಬವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.



ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ರಾಜ್ಯದ ಎಲ್ಲ ವಿಚಾರಣಾ ನ್ಯಾಯಾಲಯಗಳನ್ನು ಉದ್ದೇಶಿಸಿ ಈ ಮಹತ್ವದ ಆದೇಶ ಮಾಡಿದೆ.



'ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆ-2005'ರ ಕಲಂ 12 ಅಡಿಯಲ್ಲಿ ಯಾವುದೇ ಮಹಿಳೆ ತಮ್ಮ ಪತಿಯಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಬಹುದು. ಕಲಂ 12(5)ರ ಅಡಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಗಳನ್ನು 6 ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ನ್ಯಾಯಪೀಠ ಹೇಳಿತು.



ಸದ್ರಿ ಪ್ರಕರಣದಲ್ಲಿ ಅರ್ಜಿದಾರ ಮಹಿಳೆ ಜೀವನಾಂಶ ಕೋರಿ 2021ರ ನವೆಂಬರ್ 12ರಂದು ಅರ್ಜಿ ಸಲ್ಲಿಸಿದ್ದು, ಮಹಿಳೆಯ ಪತಿಗೆ 2021ರ ಡಿಸೆಂಬರ್ 20ರಂದು ಮ್ಯಾಜಿಸ್ಪ್ರೇಟ್‌ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಆ ದಿನದಿಂದ ಈವರೆಗೂ ಅರ್ಜಿ ಇತ್ಯರ್ಥಪಡಿಸಿಲ್ಲ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.



ಮೇಲ್ಮನವಿದಾರರಾಧ ರಾಜಮ್ಮ ಜೀವನಾಂಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ನ ಈ ಆದೇಶದ ಪ್ರತಿ ಲಭ್ಯವಾದ ದಿನದಿಂದ ಎರಡು ವಾರದಲ್ಲಿ ಇತ್ಯರ್ಥಪಡಿಸಬೇಕು ಎಂದು ನಗರದ 3ನೇ ಮೆಟ್ರೋಪಾಲಿಟನ್‌ ಮ್ಯಾಜಿಸ್ಪ್ರೇಟ್‌ ಟ್ರಾಫಿಕ್‌ ಕೋರ್ಟ್‌ಗೆ ನಿರ್ದೇಶನ ನೀಡಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200