-->
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 32 ಜವಾನ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 32 ಜವಾನ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 32 ಜವಾನ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ





ಕೋಲಾರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 32 ಜವಾನ(Peon) ಮತ್ತು ಶೀಘ್ರ ಲಿಪಿಗಾರ(Stenographer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ಓದಬಹುದು.


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 27, 2022 ರಿಂದ ಜುಲೈ 26,2022ರ ವರೆಗೆ ಅವಕಾಶ ಇರುತ್ತದೆ.


ಹುದ್ದೆಗಳ ವಿವರ :

ಜವಾನ - 22 ಹುದ್ದೆಗಳು

ಶೀಘ್ರಲಿಪಿಗಾರ - 10 ಹುದ್ದೆಗಳು

ಒಟ್ಟು 32 ಹುದ್ದೆಗಳು


ವಿದ್ಯಾರ್ಹತೆ :

ಸ್ಟೆನೋ ಯಾ ಶೀಘ್ರ ಲಿಪಿಗಾರ ಹುದ್ದೆಗಳಿಗೆ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ


Peon/ಜವಾನ ಹುದ್ದೆಗಳಿಗೆ SSLC ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.


ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳ ಹೆಸರು - ವೇತನ (ತಿಂಗಳಿಗೆ)

ಶೀಘ್ರಲಿಪಿಗಾರ -ತಿಂಗಳಿಗೆ 27,650/- ರಿಂದ 52,650/-ರೂ

ಜವಾನ ರೂ.17000/- ರಿಂದ 28950/-ರೂ


ವಯೋಮಿತಿ :

ಜುಲೈ 26, 2022ರಂದು ಕನಿಷ್ಠ 18 ವಯಸ್ಸು ತುಂಬಿರಬೇಕು. ವಯೋಮಿತಿಯಲ್ಲಿ ಸಡಿಲಿಕೆ ಇದೆ.


ಆಯ್ಕೆಯ ವಿಧಾನ :

ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಕನ್ನಡ: ಪ್ರತಿ ನಿಮಿಷಕ್ಕೆ 260 ಅಕ್ಷರ ವೇಗದಲ್ಲಿ 5 ನಿಮಿಷ ಉಕ್ತಲೇಖನ, ಅದನ್ನು 45 ನಿಮಿಷಗಳಲ್ಲಿ ಲಿಪಿಯಂತರ ಮಾಡಬೇಕು.


ನಿಗದಿತ ಅರ್ಜಿ ಶುಲ್ಕ :

ಸಾಮಾನ್ಯ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.


ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/kolar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.


ಈ ರೀತಿ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು SBIನ ಯಾವುದೇ ಶಾಖೆಗೆ ಜುಲೈ 28,2022ರೊಳಗೆ ಹಾಜರುಪಡಿಸಿ ಶುಲ್ಕ ಪಾವತಿಸಬಹುದು. ಇದನ್ನು ಹೊರತುಪಡಿಸಿ ಬೇರಾವ ರೀತಿಯಲ್ಲೂ ಶುಲ್ಕ ಸ್ವೀಕರಿಸುವುದಿಲ್ಲ.


ಅರ್ಜಿ ಸಲ್ಲಿಸುವುದು ಹೇಗೆ :

https://districts.ecourts.gov.in/kolar-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 27,2022 ರಿಂದ ಜುಲೈ 26,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200