ಕರ್ನಾಟಕ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ
Thursday, June 30, 2022
ಕರ್ನಾಟಕ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನಿವೃತ್ತಿ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಸಿಜೆಐ ಋತುರಾಜ್ ಅವಸ್ಥಿ ಜುಲೈ 2 ರಂದು ನಿವೃತ್ತರಾಗುತ್ತಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ.
ಗುರುವಾರ ಈ ಬಗ್ಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ. ಆರಾಧೆ ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನ್ಯಾ. ಅವಸ್ಥಿ ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾ ದಿನ ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತಮ್ಮ 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 62.