-->
ಪೂರ್ವಾನುಮತಿ ಪಡೆಯದೆ ಖಾಸಗಿ ದೂರು: ನಿವೃತ್ತ SP ಜಯಂತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಪೂರ್ವಾನುಮತಿ ಪಡೆಯದೆ ಖಾಸಗಿ ದೂರು: ನಿವೃತ್ತ SP ಜಯಂತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಪೂರ್ವಾನುಮತಿ ಪಡೆಯದೆ ಖಾಸಗಿ ದೂರು: ನಿವೃತ್ತ SP ಜಯಂತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ





2008ರ ಕೋಮು ಗಲಭೆ ಸಂದರ್ಭದಲ್ಲಿ ನಡೆದ ಒಂದು ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ವಾರಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.



ಘಟನೆಯ ವಿವರ

2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ಅಂದಿನ ಇನ್‌ಸ್ಪೆಕ್ಟರ್ ಜಯಂತ್ ಶೆಟ್ಟಿ ಮತ್ತು ಎಸ್‌ಐ ಶಿವಪ್ರಕಾಶ್ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಕಬೀರ್ ಉಳ್ಳಾಲ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.



ಪ್ರಕರಣ ಕೈಗೆತ್ತಿಕೊಂಡ ವಿಚಾರಣಾ ನ್ಯಾಯಾಲಯ, ಜಯಂತ್ ಶೆಟ್ಟಿ ಹಾಗು ಶಿವಪ್ರಕಾಶ್‌ಗೆ ನೋಟಿಸ್ ಜಾರಿಗೊಳಿಸಿತ್ತು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಈ ಇಬ್ಬರು ಪೊಲೀಸ್ ಅಧಿಕಾರಗಳು ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದರು.



ಈ ಇಬ್ಬರು ಪೊಲೀಸ್ ಅಧಿಕಾರಿಗಳ ಅರ್ಜಿಯನ್ನು ಪುರಸ್ಕರಿಸಿದ್ದ ಸೆಷನ್ಸ್ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ಕಬೀರ್ ಮಾನ್ಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ನಡೆಸಿ, ಮರು ತನಿಖೆ ನಡೆಸುವಂತೆ ಆದೇಶಿಸಿ, ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು.



ಈ ನೋಟೀಸ್ ಪ್ರಕಾರ ಶಿವಪ್ರಕಾಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಜಯಂತ್ ಶೆಟ್ಟಿಗೆ ಯಾವುದೇ ನೋಟಿಸ್ ಸಿಕ್ಕಿರಲಿಲ.



ಕಳೆದ ಜೂನ್ 20, 2022ರಂದು ಮಂಗಳೂರಿನ ಹೆಚ್ಚುವರಿ ದಿವಾಣಿ ನ್ಯಾಯಾಲಯ ಪ್ರಕರಣದ ಆರೋಪಿತರಲ್ಲಿ ಒಬ್ಬರಾದ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು.



ನ್ಯಾಯಾಲಯದ ಈ ಆದೇಶದ ಹಿನ್ನೆಲೆಯಲ್ಲಿ, ಜಯಂತ್ ಶೆಟ್ಟಿ ತಮ್ಮ ವಕೀಲರ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸದ್ರಿ ಪ್ರಕರಣಕ್ಕೆ ಸಂಬಂಧಿಸಿ ನನಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ. ಅಲ್ಲದೆ, ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು CrPC ಸೆಕ್ಷನ್ 197, ಪೊಲೀಸ್ ಕಾಯ್ದೆಯ ಸೆಕ್ಷನ್ 170 ಪ್ರಕಾರ ಅನುಮತಿ ಪಡೆದಿಲ್ಲ. ಆದ್ದರಿಂದ ಪ್ರಕರಣವನ್ನು ವಜಾಗೊಳಿಸಬೇಕು ಎಂದು ಹೈಕೋರ್ಟ್‌ ಮುಂದೆ ವಾದಿಸಿದರು.



ಜಯಂತ್ ಶೆಟ್ಟಿ ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಇಡೀ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ ಎಂದು ಜಯಂತ್ ಶೆಟ್ಟಿ ಪರ ವಕೀಲರಾದ ಪದ್ಮರಾಜ್ ಆರ್. ಮಾಹಿತಿ ನೀಡಿದ್ದಾರೆ.



ದಕ್ಷ, ಪ್ರಾಮಾಣಿಕ ಹಾಗು ಖಡಕ್ ಎಸ್ಪಿ ಆಗಿದ್ದ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರುವುದು ಕುತೂಹಲ ಕೆರಳಿಸಿತ್ತು.

Ads on article

Advertise in articles 1

advertising articles 2

Advertise under the article