-->
ಆರೋಪಿಯನ್ನೇ ವಿವಾಹವಾದ ಸಂತ್ರಸ್ತೆ: ಪೋಕ್ಸೊ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಆರೋಪಿಯನ್ನೇ ವಿವಾಹವಾದ ಸಂತ್ರಸ್ತೆ: ಪೋಕ್ಸೊ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಆರೋಪಿಯನ್ನೇ ವಿವಾಹವಾದ ಸಂತ್ರಸ್ತೆ: ಪೋಕ್ಸೊ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌





ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಆರೋಪಿ ಮದುವೆ ಆದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಎಫ್‌ಐಆರ್ ರದ್ದುಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.



ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ರಾಜಿಯಾದರೆ ಅತ್ಯಾಚಾರ ಪ್ರಕರಣವನ್ನೂ ಕೊನೆಗೊಳಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು.



ಅಪ್ರಾಪ್ತೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ಇದಾಗಿತ್ತು. ಆರೋಪಿ ಹೈಕೋರ್ಟ್ ಮೆಟ್ಟಿಲೇರಿ, ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು. ಈ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಸಿದೆ.



ಅಪ್ರಾಪ್ತೆಯ ಅಪರಣ ಮತ್ತು ಅತ್ಯಾಚಾರ ಆರೋಪ ಅರ್ಜಿದಾರರ ಮೇಲಿದೆ. ಆದರೆ, ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.‌ ಸಂತ್ರಸ್ತರು ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಆರೋಪಿಯನ್ನು ಸ್ವಇಚ್ಚೆ ಮೇರೆಗೆ ಮದುವೆಯಾಗಿದ್ದಾರೆ. 



ಮದುವೆಯ ಬಳಿಕ ಅವರಿಗೆ ಮಗು ಜನಿಸಿದೆ.‌ ಈಗ ಸಂತ್ರಸ್ತೆ ಅರ್ಜಿದಾರರೊಂದಿಗೆ ಬಾಳು ನಡೆಸುತ್ತಿದ್ದಾರೆ. ಈ ಸನ್ನಿವೇಶದಲ್ಲಿ ಆರೋಪಿ ವಿರುದ್ಧ ಪ್ರಕರಣ ಮುಂದುವರಿಸುವುದು ನ್ಯಾಯಸಮ್ಮತವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಹಾಗೂ ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದೆ.



ಸಮ್ಮತಿಯಿಂದಲೇ ತನ್ನ ಜೊತೆ ಆರೋಪಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಸಂತ್ರಸ್ತೆಯೇ 2019ರ ಅಕ್ಟೋಬರ್‌ನಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು. 2020ರ ಮಾರ್ಚ್‌ನಲ್ಲಿ ಸಂತ್ರಸ್ತೆಗೆ 18 ವರ್ಷದ ತುಂಬಿದೆ.



ಕಳೆದ 2020ರ ಜೂನ್ ನಲ್ಲಿ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಸಂತ್ರಸ್ತೆಯು ತಾನು ಹಾಗೂ ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದೆವು. ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳೆಸಿದೆವು ಎಂದು ಹೇಳಿಕೆ ನೀಡಿದ್ದರು. ಈ ಆಧಾರದಲ್ಲಿ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿತ್ತು.



2020ರ ಅಕ್ಟೋಬರ್‌ನಲ್ಲಿ ಅವರಿಬ್ಬರು ಮದುವೆಯಾಗಿದ್ದಾರೆ. ಮದುವೆ ನೋಂದಣಿ ಕೂಡ ಅದೇ ದಿನ ನಡೆದಿದೆ. 2021ರ ಡಿಸೆಂಬರ್‌ನಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ.‌ ಹಾಗಾಗಿ, ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸಿವುದು ಅರ್ಥಹೀನ ಎಂದಿರುವ ಹೈಕೋರ್ಟ್‌ ಪ್ರಕರಣ ರದ್ದುಪಡಿಸಿದೆ.



ಇದನ್ನೂ ಓದಿ;

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ರಾಜಿಯಾದರೆ ಅತ್ಯಾಚಾರ ಪ್ರಕರಣವನ್ನೂ ಕೊನೆಗೊಳಿಸಬಹುದು ಎಂದ ಕರ್ನಾಟಕ ಹೈಕೋರ್ಟ್

Ads on article

Advertise in articles 1

advertising articles 2

Advertise under the article