ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಜೈಶಂಕರ್
ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಜೈಶಂಕರ್
..ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ನೂತನ ಸದಸ್ಯ ಕಾರ್ಯದರ್ಶಿ ಆಗಿ ಜಿಲ್ಲಾ ನ್ಯಾಯಾಧೀಶರಾದ ಜೈಶಂಕರ್ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಹುದ್ದೆಯಲ್ಲಿ ಇದ್ದರು.
ಸುಪ್ರೀಂ ಕೋರ್ಟ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ. ಶಶಿಧರ ಶೆಟ್ಟಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಧೀಶರಾದ ಜೈಶಂಕರ್ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ನೇಮಕ ಮಾಡಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ- 1987ರ ಸೆಕ್ಷನ್ 6(3)ರ ಅಡಿ ಕಾನೂನು ಇಲಾಖೆಯ (ಆಡಳಿತ) ಸರ್ಕಾರದ ಅಧೀನ ಕಾರ್ಯದರ್ಶಿ ಆದಿನಾರಾಯಣ ಈ ನೇಮಕ ಆದೇಶ ಹೊರಡಿಸಿದ್ದಾರೆ.
2003ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆ ಆರಂಭಿಸಿ ನ್ಯಾ. ಜೈಶಂಕರ್ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ.
ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿಯಾಗಿದ್ದ ಎಚ್ ಶಶಿಧರ ಶೆಟ್ಟಿ ಅವರನ್ನು ಈಚೆಗೆ ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಹೀಗಾಗಿ, ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು. ಈ ಹುದ್ದೆಗೆ ಜೈಶಂಕರ್ ಅವರನ್ನು ನೇಮಕ ಮಾಡಲಾಗಿದೆ.