ಏಕರೂಪ ನಾಗರಿಕ ಸಂಹಿತೆ: ದಂಡದೊಂದಿಗೆ ಅರ್ಜಿ ತಿರಸ್ಕರಿಸಲು ಕೇಂದ್ರ ಸರ್ಕಾರ ಮನವಿ
ಏಕರೂಪ ನಾಗರಿಕ ಸಂಹಿತೆ: ದಂಡದೊಂದಿಗೆ ಅರ್ಜಿ ತಿರಸ್ಕರಿಸಲು ಕೇಂದ್ರ ಸರ್ಕಾರ ಮನವಿ
ಏಕ ರೂಪದ ನಾಗರಿಕ ಸಂಹಿತೆಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ವಿವಾಹ ವಿಚ್ಚೇದನ, ಮಕ್ಕಳ ದತ್ತು ಪಡೆಯುವುದು ಮತ್ತು ಪಾಲನೆಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಏಕರೂಪದ ನಾಗರಿಕ ಸಂಹಿತೆ ರೂಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಂದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಬಿಜೆಪಿಯ ವಕ್ತಾರರೂ ಆಗಿರುವ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದರು.
ಪ್ರಕರಣ: ಅಶ್ವಿನ್ ಕುಮಾರ್ ಉಪಾಧ್ಯಾಯ Vs ಭಾರತ ಸರ್ಕಾರ (ಸುಪ್ರೀಂ ಕೋರ್ಟ್)
ಇದೇ ವಿಷಯದ ಕುರಿತು ಸ್ವತಃ ಅಶ್ವಿನ್ ಅವರೇ ಸಲ್ಲಿಸಿರುವ ಅರ್ಜಿ ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ. ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದ ಅಂಶಗಳು ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿ ಜೊತೆ ಸಂಬಂಧ ಹೊಂದಿರುವುದರಿಂಧ ಸದ್ರಿ ಅರ್ಜಿ ಪ್ರಾಮಾಣಿಕವಾಗಿದೆ ಎಂದು ಹೇಳಲಾಗದು ಕೇಂದ್ರ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ವಕ್ತಾರ ಸಲ್ಲಿಸಿರವ ಅರ್ಜಿಯನ್ನು ದಂಡದೊಂದಿಗೆ ವಜಾಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.