-->
ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ- ಸಿಎಂ ಘೋಷಣೆ

ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ- ಸಿಎಂ ಘೋಷಣೆ

ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ- ಸಿಎಂ ಘೋಷಣೆ






ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯನ್ನು ಪಂಜಾಬ್ ಸರ್ಕಾರ ನೀಡಿದ್ದು, ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್ ನೀಡಿದೆ.



ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ತೀರ್ಮಾನಿಸಿರುವ ಜನಪ್ರಿಯ ಪಂಜಾಬ್ ಸರ್ಕಾರ ತನ್ನ ನೌಕರರಿಗೆ ಸಿಹಿಯಾದ ಆದೇಶ ಮಾಡಿದೆ.



ಈ ಸುದ್ದಿಯನ್ನು ಹಂಚಿಕೊಂಡ ಮುಖ್ಯಮಂತ್ರಿ ಭಗವಂತ್ ಮಾನ್, ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಪಂಜಾಬ್ ಸರ್ಕಾರದ ನಿರ್ಧಾರವನ್ನು ರಾಜ್ಯದ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಸಮರ್ಪಿಸಿದ್ದಾರೆ.



ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಾತ್ವಿಕ ನಿರ್ಧಾರ ಕೈಗೊಂಡಿದ್ದೇವೆ. ಇದರಿಂದ ಲಕ್ಷಾಂತರ ನೌಕರರಿಗೆ ಅನುಕೂಲವಾಗಲಿದೆ ಎಂದು ಆಮ್ ಆದ್ಮಿ ಮುಖ್ಯಮಂತ್ರಿ ಮಾನ್ ತಿಳಿಸಿದ್ದಾರೆ.





ಕಳೆದ 2004ರಲ್ಲಿ ಸ್ಥಗಿತಗೊಂಡ ಹಿಂದಿನ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ರಾಜ್ಯ ಸರ್ಕಾರಿ ನೌಕರರ ಪ್ರಾಥಮಿಕ ಬೇಡಿಕೆಗಳಲ್ಲಿ ಒಂದಾಗಿತ್ತು. ಸರ್ಕಾರಿ ನೌಕರರ 6% ತುಟ್ಟಿಭತ್ಯೆಗೆ ರಾಜ್ಯ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮಾನ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu