ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಇಲ್ಲ- ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್
ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಇಲ್ಲ- ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್
ಭ್ರಷ್ಟಾಚಾರದ ವಿಚಾರದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶಾಕ್ ನಿಡಿದೆ.
ಇಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಯಾ ವಿಚಾರಣೆಗೆ ಆಯಾ ಸರ್ಕಾರಗಳು ನಾಲ್ಕು ತಿಂಗಳ ಒಳಗೆ ಅನುಮತಿ ನೀಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಪಿ.ಎಸ್. ನರಸಿಂಹ ಅವರಿದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ಲಂಚಕ್ಕೆ ಪಡೆದುಕೊಳ್ಳುವುದು ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ ಕೆಲವು ಆರೋಪಿ ಅಧಿಕಾರಿಗಳು ತಮಗಿರುವ ಪ್ರಭಾವವನ್ನು ಬಳಸಿಕೊಂಡು ವಿಚಾರಣೆ ವಿಳಂಬಗೊಳ್ಳುವಂತೆ ಮಾಡುತ್ತಾರೆ. ಇಂತಹ ಆರೋಪಿಗಳ ರಕ್ಷಣೆ ಮಾಢುವುದೂ ಮಹಾಪಾಪ ಎಂದು ಸುಪ್ರೀಂ ಕೋರ್ಟ್ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿದೆ.
ಭ್ರಷ್ಟಾಚಾರ ಸೇರಿದಂತೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿಚಾರಣೆಗೆ ನಾಲ್ಕು ತಿಂಗಳೊಳಗಾಗಿ ಅನುಮತಿ ನೀಡುವುದು ಕಡ್ಡಾಯ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಇಂತಹ ಆರೋಪಿಗಳ ವಿರುದ್ಧದ ವಿಚಾರಣೆಯನ್ನು ವಿಳಂಬ ಮಾಡುವುದು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದಂತೆ ಎಂದು ಪರೋಕ್ಷವಾಗಿ ಅವರಿಗೆ ನೆರವಾಗುವ ಅಧಿಕಾರಿಗಳಿಗೆ ಚಾಟಿ ಬೀಸಿದೆ.