-->
ವಕೀಲರ ಮೇಲೆ ಹಲ್ಲೆ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಬೆಂಗಳೂರು ವಕೀಲರ ಬೃಹತ್ ಪ್ರತಿಭಟನೆ

ವಕೀಲರ ಮೇಲೆ ಹಲ್ಲೆ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಬೆಂಗಳೂರು ವಕೀಲರ ಬೃಹತ್ ಪ್ರತಿಭಟನೆ

ವಕೀಲರ ಮೇಲೆ ಹಲ್ಲೆ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಬೆಂಗಳೂರು ವಕೀಲರ ಬೃಹತ್ ಪ್ರತಿಭಟನೆ







ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಎಸ್‌ಐ ಅವರಿಂದ ಅಮಾನವೀಯ ದೌರ್ಜನ್ಯ, ಅಕ್ರಮ ಬಂಧನ ಹಾಗೂ ಬೆಂಗಳೂರಿನ ವಕೀಲ ಲಕ್ಷ್ಮೀಶ ಅವರ ಮೇಲೆ ಗೂಂಡಾ ದಾಳಿಯನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘ ಬೃಹತ್ ಪ್ರತಿಭಟನೆ ನಡೆಸಿತು.



ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದ ನ್ಯಾಯವಾದಿಗಳು ಮುಂಬವರುವ ಬೆಳಗಾವಿ ವಿಧಾನ ಮಂಡಳ ಅಧಿವೇಶನದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ದೃಢ ನಿರ್ಧಾರ ಮಾಡಬೇಕು ಎಂದು ಒತ್ತಾಯಿಸಿದರು.



ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, "ಬೆಳಗಾವಿ ಅಧಿವೇಶನದಲ್ಲೇ ಪ್ರಸ್ತಾವಿತ ಮಸೂದೆ ಮಂಡಿಸಿ ವಕೀಲರ ಸುರಕ್ಷತಾ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ದೃಢ ನಿರ್ಧಾರ ಮಾಡಬೇಕು. ಈ ಸಂಬಂಧ ಡಿಸೆಂಬರ್‌ 10 ರಾಜ್ಯ ವಕೀಲರ ಸಂಘದ ಎಲ್ಲಾ ಜಿಲ್ಲಾ ಘಟಕಗಳ ಪ್ರಮುಖರ ಸಭೆ ನಡೆಸಲಾಗುವುದು. ರಾಜ್ಯ ವಕೀಲರ ಪರಿಷತ್ ನೇತೃತ್ವದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆಸಿ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು" ಎಂದು ಹೇಳಿದರು.



ನ್ಯಾಯವಾದಿಗಳ ಮೇಲಿನ ಹಲ್ಲೆ ಮತ್ತು ಅಕ್ರಮ ಬಂಧನವನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ತಾಳಿದರೆ ರಾಜ್ಯವ್ಯಾಪಿ ಹೋರಾಟಕ್ಕೆ ವಕೀಲರು ಸಜ್ಜಾಗಿದ್ದಾರೆ" ಎಂದು ವಿವೇಕ್ ಎಚ್ಚರಿಕೆ ನೀಡಿದರು.



ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಜಿ. ರವಿ, ಖಜಾಂಚಿ ಎಂ. ಟಿ. ಹರೀಶ್ ಅವರೂ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಗೃಹ ಸಚಿವರನ್ನು ತರಾಟೆಗೆ ತೆಗೆದುಕೊಂಡ ವಕೀಲರು, ಎಸ್‌ಐ ಸುತೇಶ್ ದರ್ಪ ತೋರಿದ ಘಟನೆಯನ್ನು ಖಂಡಿಸಿದರು.



ಇದನ್ನೂ ಓದಿ:

ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸಿ ಎಸ್‌ಐ: ವಕೀಲನ ಬಂಧನ ವಿರುದ್ಧ ಭುಗಿಲೆದ್ದ ಆಕ್ರೋಶ


Ads on article

Advertise in articles 1

advertising articles 2

Advertise under the article