-->
ನಟಿ ಅಭಿನಯಗೆ ಜೈಲು ಶಿಕ್ಷೆ ನೀಡಿದ ಹೈಕೋರ್ಟ್‌: ಕಾರಣ ಏನು ಗೊತ್ತೇ..?

ನಟಿ ಅಭಿನಯಗೆ ಜೈಲು ಶಿಕ್ಷೆ ನೀಡಿದ ಹೈಕೋರ್ಟ್‌: ಕಾರಣ ಏನು ಗೊತ್ತೇ..?

ನಟಿ ಅಭಿನಯಗೆ ಜೈಲು ಶಿಕ್ಷೆ ನೀಡಿದ ಹೈಕೋರ್ಟ್‌: ಕಾರಣ ಏನು ಗೊತ್ತೇ..?

ಅನುಭವ ಖ್ಯಾತಿಯ ಕನ್ನಡದ ಹೆಸರಾಂತ ಚಿತ್ರನಟಿ ಅಭಿನಯ ಅವರಿಗೆ ಕರ್ನಾಟಕ ಹೈಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.ನ್ಯಾ. ಎಚ್.ಬಿ. ಪ್ರಭಾಕರ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯ ಹಾಗೂ ಅವರ ತಾಯಿ ಜಯಮ್ಮ, ಅಣ್ಣ ಚಲುವರಾಜ್ ಅವರಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಸುಮಾರು 20 ವರ್ಷಗಳ ಹಿಂದಿನ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ.ಅತ್ತಿಗೆ ಅಕ್ಷ್ಮಿ ದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ ಅಭಿನಯ ಸೇರಿದಂತೆ ಎಲ್ಲ ಆರೋಪಿಗಳ ಖುಲಾಸೆಗೊಳಿಸಿ ಬೆಂಗಳೂರಿನ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಅಭಿಯೋಜನೆ ಪರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಫಿರ್ಯಾದುದಾರರೂ ಕೂಡ ಪ್ರತ್ಯೇಕವಾಗಿ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸೆಷನ್ಸ್‌ ನ್ಯಾಯಾಲಯ 2012ರ ಮಾರ್ಚ್‌ 9ರಂದು ನೀಡಿದ್ದ ಆದೇಶವನ್ನು ರದ್ದುಪಡಿಸಿತು.


ಪ್ರಕರಣದಲ್ಲಿ ಅಭಿನಯ ಮತ್ತು ಅವರ ಕುಟುಂಬದ ಸದಸ್ಯರನ್ನು ದೋಷಿ ಎಂದು ತೀರ್ಮಾನಿಸಿ 2010ರ ಜನವರಿ 5ರಂದು ಬೆಂಗಳೂರಿನ ಎಂಟನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಾಸಿಕ್ಯೂಷನ್ ಪರ ವಿ.ಎಸ್. ವಿನಾಯಕ ವಾದ ಮಂಡಿಸಿದ್ದರು.ಇದನ್ನೂ ಓದಿ

20 ವರ್ಷಗಳ ಕಾಲಬದ್ಧ ವೇತನ ಭಡ್ತಿ: ಸರ್ಕಾರಿ ಆದೇಶ ಪೂರ್ವಾನ್ವಯಗೊಳಿಸಿ ಜಾರಿ- ಹೈಕೋರ್ಟ್ ಮಹತ್ವದ ಆದೇಶ
ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುವಿಮೆ ಪರಿಹಾರಕ್ಕೆ HDFC ಹಿಂದೇಟು: ಬಿಸಿ ಮುಟ್ಟಿಸಿದ ಗ್ರಾಹಕ ನ್ಯಾಯಾಲಯ, ಬಡ್ಡಿ ಸಹಿತ 30 ಲಕ್ಷ ಪಾವತಿಗೆ ಆದೇಶಮಹಿಳಾ ನ್ಯಾಯಾಧೀಶರಿಗೆ ಚಾಕು ತೋರಿಸಿ ಬೆದರಿಸಿದ ಆರೋಪಿ: ಕೋರ್ಟನ್ನೇ ಬೆಚ್ಚಿಬೀಳಿಸಿದ ಪ್ರಸಂಗ!

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200