ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ: ನ್ಯಾಯವಾದಿಗಳ ಪರ ನಿಂತ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಹೇಳಿದ್ದೇನು..?
ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ: ನ್ಯಾಯವಾದಿಗಳ ಪರ ನಿಂತ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಹೇಳಿದ್ದೇನು..?
ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರ ಸಂರಕ್ಷಣಾ ಕಾಯ್ದೆ ಬೆಂಬಲಿಸಿದ್ದು, ವಕೀಲರು ಮತ್ತು ಅವರ ವೃತ್ತಿಯ ಹಿತದೃಷ್ಟಿಯಿಂದ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಭಾಗವಹಿಸಿದ ಅವರು, ರಾಜ್ಯ ಸರ್ಕಾರಕ್ಕೆ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ರೂಪಿಸಿ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನ ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರು ಸೇರಿ ಒಂದು ಕರಡು ಮಸೂದೆಯನ್ನು ರೂಪಿಸಿದ್ದು, ಇದನ್ನು ರಾಜ್ಯದ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಜೊತೆಗೆ ಚರ್ಚಿಸಿ ಅವರಿಗೆ ಸಲ್ಲಿಸಿದ್ದಾರೆ.
ಈ ಕರಡು ಮಸೂದೆಯನ್ನು ಕಾನೂನು ಸಚಿವಾಲಯ ಪರಿಗಣಿಸಿ ಪರಿಶೀಲಿಸಿ ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕು ಎಂದು ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವರು ಸದನದಲ್ಲಿ ಉಪಸ್ಥಿತರಿಲ್ಲ. ಅವರಿಂದ ಈ ಬಗ್ಗೆ ಸೂಕ್ತ ಸ್ಪಷ್ಟನೆ, ಉತ್ತರ ಕೊಡಿಸುತ್ತೇನೆ ಎಂದು ಹೇಳಿದ್ದು, ಕಾಯ್ದೆ ರೂಪಿಸಲು ಪೂರಕವಾಗಿ ಮಾತನಾಡಿದ್ದಾರೆ.