ಕರ್ನಾಟಕ ಹೈಕೋರ್ಟ್: ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
Saturday, January 21, 2023
ಕರ್ನಾಟಕ ಹೈಕೋರ್ಟ್: ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ. ಹುದ್ದಾರ್ ಮತ್ತು ಬೆಂಗಳೂರಿನ ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಟಿ. ವೆಂಕಟೇಶ್ ನಾಯಕ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದಾರೆ.
ಸುಪ್ರೀಂ ಕೋರ್ಟಿನ ಕೊಲೀಜಿಯಂ ಈ ಇಬ್ಬರು ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸ್ಸು ಮಾಡಿತ್ಉ.
ಪ್ರಸ್ತುತ, ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿವೆ. ಈ ನೇಮಕದಿಂದ ಒಟ್ಟು 49 ನ್ಯಾಯಮೂರ್ತಿಗಳ ಹುದ್ದೆ ಭರ್ತಿಯಾಗಿದ್ದು, 13 ಸ್ಥಾನಗಳು ಖಾಲಿ ಉಳಿದಿವೆ.