-->
ಚೆಕ್ ಬೌನ್ಸ್ ಪ್ರಕರಣದಲ್ಲಿ 4 ವರ್ಷ ಶಿಕ್ಷೆ: ಮೂಡಿಗೆರೆ ಶಾಸಕನಿಗೆ ಸ್ಥಾನ ಅನರ್ಹತೆಯ ಸಂಕಷ್ಟ

ಚೆಕ್ ಬೌನ್ಸ್ ಪ್ರಕರಣದಲ್ಲಿ 4 ವರ್ಷ ಶಿಕ್ಷೆ: ಮೂಡಿಗೆರೆ ಶಾಸಕನಿಗೆ ಸ್ಥಾನ ಅನರ್ಹತೆಯ ಸಂಕಷ್ಟ

ಚೆಕ್ ಬೌನ್ಸ್ ಪ್ರಕರಣದಲ್ಲಿ 4 ವರ್ಷ ಶಿಕ್ಷೆ: ಮೂಡಿಗೆರೆ ಶಾಸಕನಿಗೆ ಸ್ಥಾನ ಅನರ್ಹತೆಯ ಸಂಕಷ್ಟ





ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನಾಲ್ಕು ವರ್ಷ ಜೈಲು ಶಿಕ್ಷೆ ಘೋಷಿಸಿ ತೀರ್ಪು ನೀಡಿದೆ. ಇದರೊಂದಿಗೆ ಕುಮಾರಸ್ವಾಮಿ ಶಾಸಕತ್ವದಿಂದ ಅನರ್ಹಗೊಳ್ಳುವ ಸಂಕಷ್ಟಕ್ಕೆ ತುತ್ತಾಗಿದ್ದಾರೆ.



ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಟ್ಟು ಚೆಕ್ ಬೌನ್ಸ್ ಪ್ರಕರಣದಲ್ಲಿ ಒಟ್ಟು 1.38 ಕೋಟಿ ರೂ. ಹಣ ಪಾವತಿಸಬೇಕು ಎಂದು ಕೋರ್ಟ್ ತೀರ್ಪು ನೀಡಿದೆ.



ಹೂವಪ್ಪ ಗೌಡ ಎಂಬವರಿಂದ 1.35 ಕೋಟಿ ರೂ.ಗಳನ್ನು ಕುಮಾರಸ್ವಾಮಿ ಸಾಲವಾಗಿ ಪಡೆದುಕೊಂಡಿದ್ದರು. ಸಾಲ ಮರುಪಾವತಿಗೆ 8 ಚೆಕ್‌ಗಳನ್ನು ನೀಡಿದ್ದರು. ಆದರೆ, ಎಲ್ಲ ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಹೂವಪ್ಪ ಗೌಡ ಎಂಟು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು.



ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲ ಎಂಟು ಪ್ರಕರಣಗಳಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಆರೋಪಿಗೆ ತಲಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.



Ads on article

Advertise in articles 1

advertising articles 2

Advertise under the article