-->
ಕೆಲಸ ಇಲ್ಲ ಎಂಬ ಕಾರಣಕ್ಕೆ ಪತಿ ಜೀವನಾಂಶದಿಂದ ತಪ್ಪಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್

ಕೆಲಸ ಇಲ್ಲ ಎಂಬ ಕಾರಣಕ್ಕೆ ಪತಿ ಜೀವನಾಂಶದಿಂದ ತಪ್ಪಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್

ಕೆಲಸ ಇಲ್ಲ ಎಂಬ ಕಾರಣಕ್ಕೆ ಪತಿ ಜೀವನಾಂಶದಿಂದ ತಪ್ಪಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್





ದುಡಿಯಲು ಸಾಮರ್ಥ್ಯ ಇರುವ ಪತಿ ತನ್ನ ಪತ್ನಿ ಮತ್ತು ಮಗುವನ್ನು ಪೋಷಣೆ ಮಾಡಬೇಕು. ಉದ್ಯೋಗ ಇಲ್ಲದಿದ್ದರೆ ಉದ್ಯೋಗ ಹುಡುಕಿಕೊಂಡು ಸಂಪಾದನೆ ಮಾಡಿ ಪೋಷಣೆ ಮಾಡಬೇಕಾದದ್ದು ಪತಿಯ ಜವಾಬ್ದಾರಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.



ವಿಚ್ಚೇದನ ಪಡೆಯುವ ಸಂದರ್ಭದಲ್ಲಿ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ. ನಾಗಪ್ರಸನ್ನ ನೇತೃತ್ವದ ನ್ಯಾಯಪೀಠ ವಜಾಗೊಳಿಸಿತು.



ತಾನು ಹಲವು ಕಾಯಿಲೆಗಳಿಂದ ನರಳುತ್ತಿದ್ದೇನೆ. ಸರಿಯಾದ ಉದ್ಯೋಗವಿಲ್ಲ. ತಿಂಗಳಿಗೆ 15 ಸಾವಿರಕ್ಕಿಂತ ಹೆಚ್ಚು ದುಡಿಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಪತ್ನಿ ಮತ್ತು ನಾಲ್ಕು ವರ್ಷದ ಮಗನಿಗೆ ಜೀವನಾಂಶ ನೀಡಲು ಸಾಧ್ಯವಿಲ್ಲ ಎಂದು ಮೇಲ್ಮನವಿಯಲ್ಲಿ ಅರ್ಜಿದಾರರು ವಾದ ಮಂಡಿಸಿದ್ದರು.



ಈ ವಾದವನ್ನು ನ್ಯಾಯಪೀಠ ಸಾರಾಸಗಟಾಗಿ ತಿರಸ್ಕರಿಸಿತು. ಜೀವನಾಂಶ ಪಾವತಿಸಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲ. ದುಡಿಯುವ ಸಾಮರ್ಥ್ಯ ಇರುವ ಪತಿಗೆ ಉದ್ಯೋಗ ಇಲ್ಲದಿದ್ದರೆ ಉದ್ಯೋಗವನ್ನು ಹುಡುಕಿಕೊಂಡು ಪತ್ನಿ ಮತ್ತು ಮಗುವಿಗೆ ಜೀವನಾಂಶ ನೀಡಲೇಬೇಕು. ಪತಿ ಮತ್ತು ಮಗುವಿಗೆ 10 ಸಾವಿರ ನೀಡಬೇಕು ಎನ್ನುವುದು ದುಬಾರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.


..


Ads on article

Advertise in articles 1

advertising articles 2

Advertise under the article