-->
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್: ಮಾಹಿತಿ ಒದಗಿಸುವ ಅಗತ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್!

ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್: ಮಾಹಿತಿ ಒದಗಿಸುವ ಅಗತ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್!

ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್: ಮಾಹಿತಿ ಒದಗಿಸುವ ಅಗತ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್!

ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪತ್ರಗಳನ್ನು ಮಾಹಿತಿ ಹಕ್ಕಿನಲ್ಲಿ ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಆದೇಶ ನೀಡಿದೆ.

ಪ್ರಧಾನಿ ಕಾರ್ಯಾಲಯ ಮತ್ತು ಗುಜರಾತ್, ದೆಹಲಿ ವಿಶ್ವವಿದ್ಯಾನಿಲಯಗಳಿಗೆ ಪ್ರಧಾನಿ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಮಾಹಿತಿಯನ್ನು ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗ ಆದೇಶ ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ನ್ಯಾಯಪೀಠ ಬದಿಗೆ ಸರಿಸಿದೆ.

ನ್ಯಾ. .ಬೀರೇನ್ ವೈಷ್ಣವ್ ನೇತೃತ್ವದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಈ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿದ್ದ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರಿಗೆ ರೂ. 25,000/- ದಂಡ ವಿಧಿಸಲಾಗಿದೆ.

1978ರಲ್ಲಿ ತಾನು ಡಿಗ್ರಿ ಪಡೆದಿದ್ದೇನೆ ಮತ್ತು 1983ರಲ್ಲಿ ದೆಹಲಿ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದೇನೆ ಎಂದು ನರೇಂದ್ರ ಮೋದಿ ಹೇಳಿಕೊಂಡಿದ್ದರು.

ಇಲ್ಲಿ ಮುಚ್ಚಿಡುವಂಥದ್ದೇನೂ ಇಲ್ಲ. ಆದರೆ, ಮಾಹಿತಿ ನೀಡುವಂತೆ ವಿಶ್ವವಿದ್ಯಾನಿಲಯವನ್ನು ಒತ್ತಾಯಿಸಲಾಗದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಪಡೆದ ವ್ಯಕ್ತಿ ವಿದ್ಯಾವಂತನಾಗಲೀ, ಅವಿದ್ಯಾವಂತನಾಗಲೀ ಯಾವುದೇ ವ್ಯತ್ಯಾಸವಾಗದು. ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಹೊಂದಿಲ್ಲ. ಜೊತೆಗೆ ಪ್ರಧಾನಿಯವರ ಖಾಸಗಿತನಕ್ಕೆ ಧಕ್ಕೆ ಆಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು.

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಯಾಗಿ ಪ್ರಮಾಣಪತ್ರ ಹಾಕುವಾಗ ಶೈಕ್ಷಣಿಕ ಅರ್ಹತೆ ಉಲ್ಲೇಖಿಸಲಾಗಿದೆ. ಹೀಗಾಗಿ ಪದವಿ ಪಡೆದಿರುವ ಬಗ್ಗೆ ಮಾಹಿತಿಯನ್ನು ಕೇಳುತ್ತಿದ್ದೇನೆ. ಹೊರತು ಅವರು ಪಡೆದ ಅಂಕಗಳ ಪಟ್ಟಿಯನ್ನಲ್ಲ ಎಂದು ಅರವಿಂದ ಕೇಜ್ರೀವಾಲ್ ಪರ ವಕೀಲರು ವಾದ ಮಂಡಿಸಿದ್ದರು.

 

 


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200