ಬಾಕಿ ಇರುವ ಪ್ರಕರಣಗಳ ಬಗ್ಗೆ ನ್ಯಾಯಾಧೀಶರು ಸಂದರ್ಶನ ನೀಡುವಂತಿಲ್ಲ: ಸುಪ್ರೀಂ ಕೋರ್ಟ್
ಬಾಕಿ ಇರುವ ಪ್ರಕರಣಗಳ ಬಗ್ಗೆ ನ್ಯಾಯಾಧೀಶರು ಸಂದರ್ಶನ ನೀಡುವಂತಿಲ್ಲ: ಸುಪ್ರೀಂ ಕೋರ್ಟ್
ತಮ್ಮ ಬಳಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಬಗ್ಗೆ ನ್ಯಾಯಾಧೀಶರು ಸುದ್ದಿ ವಾಹಿನಿಗೆ ಸಂದರ್ಶನ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾ. ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.
ಶಾಲೆಗಳಲ್ಲಿನ ಉದ್ಯೋಗಕ್ಕೆ ಸಂಬಂಧಿಸಿದ ಹಗರಣವೊಂದರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೊಲ್ಕೊತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ನ್ಯಾಯಪೀಠ ತೀವ್ರ ತರಾಟೆಗೆ ತೆಗೆದುಕೊಂಡಿತು.
ನ್ಯಾಯಾಧೀಶರು ತಮ್ಮ ಮುಂದೆ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಸುದ್ದಿ ವಾಹಿನಿಗೆ ಸಂದರ್ಶನ ನೀಡುವಂತಿಲ್ಲ. ನ್ಯಾ. ಅಭಿಜಿತ್ ಅವರು ಸಂದರ್ಶನ ನೀಡುವ ಸಂದರ್ಭದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡಿದ್ದರು.
ನ್ಯಾಯಮೂರ್ತಿಗಳ ಸಂದರ್ಶನವನ್ನು ವೈಯಕ್ತಿಕವಾಗಿ ಪರಿಶೀಲಿಸಿ ಸ್ಪಷ್ಟನೆ ನೀಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ನ್ಯಾಯಪೀಠ ನಿರ್ದೇಶನ ನೀಡಿತು. ಈ ಬಗ್ಗೆ ಶುಕ್ರವಾರದ ಒಳಗೆ ಅಫಿಡವಿಟ್ ಸಲ್ಲಿಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚನೆ ನೀಡಿತು.
ಇದೇ ವೇಳೆ, ಅಭಿಷೇಕ್ ವಿರುದ್ಧ ನಡೆಯುತ್ತಿರುವ ತನಿಖೆಯನ್ನು ಸ್ಥಗಿತಗೊಳಿಸಲು ಈ ಸಂದರ್ಶನ ಕಾರಣವಾಗಬಹುದು ಎಂಬ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ಸಿಬಿಐ ಮತ್ತು ಇ.ಡಿ. ನಡೆಸುತ್ತಿರುವ ತನಿಖೆಗೆ ಈ ಆದೇಶ ಅಡ್ಡಿಯಾಗದು ಎಂದು ಸ್ಪಷ್ಟಪಡಿಸಿತು.
.