ಮಾಹಿತಿ ನೀಡದ ಅಧಿಕಾರಿ: ಮಹೇಶ್ ಜೋಶಿಗೆ 50 ಸಾವಿರ ದಂಡ- ಕರ್ನಾಟಕ ಹೈಕೋರ್ಟ್
ಮಾಹಿತಿ ನೀಡದ ಅಧಿಕಾರಿ: ಮಹೇಶ್ ಜೋಶಿಗೆ 50 ಸಾವಿರ ದಂಡ- ಕರ್ನಾಟಕ ಹೈಕೋರ್ಟ್
ಮಾಹಿತಿ ಹಕ್ಕಿನಡಿ ಕೋರಲಾಗಿದ್ದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಹಾಗೂ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ ಮಹೇಶ್ ಜೋಶಿ ಅವರಿಗೆ ಒಟ್ಟು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ. ಎನ್.ಎಸ್. ಸಂಜಯ ಗೌಡ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಸ್ಥಾಪನೆಯಾಗಿರುವ ಎರಡನೇ ಮೇಲ್ಮನವಿ ಪ್ರಾಧಿಕಾರದ ಆದೇಶ ಪ್ರಶ್ನಿಸಿ ಮಹೇಶ್ ಜೋಷಿ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಸಾರ್ವಜನಿಕರು ಯಾವುದೇ ಮಾಹಿತಿ ಕೇಳಿದರೂ ಅದನ್ನು ನಿರಾಕರಿಸುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೋರಿದ ಮಾಹಿತಿ ನೀಡುವುದು ಅವರ ಜವಾಬ್ದಾರಿ. ಅದರಿಂದ ನುಣುಚಿಕೊಳ್ಳುವಂತಿಲ್ಲ. ಸಬೂಬು ಹೇಳಿ ಯಾಮಾರಿಸುವುದು ಕಾಯ್ದೆಯನ್ನು ನಿಷ್ಕ್ರಿಯಗೊಳಿಸಿದಂತಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಮೇಲ್ಮನವಿ ಪ್ರಾಧಿಕಾರದ ಆದೇಶ ಪಾಲಿಸುವ ಬದಲು ಅದನ್ನು ಪ್ರಶ್ನೆ ಮಾಡಲು ಅಧಿಕಾರಿ ಮಹೇಶ್ ಜೋಷಿ ಮುಂದಾಗಿದ್ದಾರೆ. ಅಲ್ಲದೆ, ಈ ಅರ್ಜಿ ಸಲ್ಲಿಸುವುದಕ್ಕೆ ಅವರು ಯಾವುದೇ ಅಧಿಕಾರ ಹೊಂದಿಲ್ಲ. ಹೀಗಾಗಿ ಈ ಅರ್ಜಿಯನ್ನು ತಲಾ 25 ಸಾವಿರ ರೂ. ದಂಡದೊಂದಿಗೆ ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.
.