-->
ಸಿದ್ರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿ! ಕಾಡುತಿದೆಯೇ ಸೋಲಿನ ಭೀತಿ?

ಸಿದ್ರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿ! ಕಾಡುತಿದೆಯೇ ಸೋಲಿನ ಭೀತಿ?

 ಸಿದ್ರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿ! ಕಾಡುತಿದೆಯೇ ಸೋಲಿನ ಭೀತಿ?ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ (ನಕಲಿ) ಪತ್ರವೊಂದನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಪತ್ರ ಬರೆದಿದ್ದಾರೆ ಎಂಬಂತೆ ಬಿಂಬಿಸಲಾಗಿರುವ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ನಾನು ಯಾವುದೇ ಪತ್ರವನ್ನೂ ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು ಎಂದು ಅವರು ವಿನಂತಿಸಿಕೊಂಡಿದ್ದಾರೆ.

ನನ್ನ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಂಬಂಧ ಸೌಹಾರ್ದಯುತವಾಗಿದೆ. ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

Ads on article

Advertise in articles 1

advertising articles 2

Advertise under the article