ರಾಜ್ಯದಲ್ಲಿ ಸರ್ಕಾರಿ ಅಭಿಯೋಜಕರ ನೇಮಕಾತಿ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿದ್ದೇನು..?
ರಾಜ್ಯದಲ್ಲಿ ಸರ್ಕಾರಿ ಅಭಿಯೋಜಕರ ನೇಮಕಾತಿ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿದ್ದೇನು..?
ಸರ್ಕಾರಿ ಅಭಿಯೋಜಕರ ನೇಮಕಾತಿಗೆ ಸಂಬಂಧಿಸಿದಂತೆ ಸದ್ಯದ ವಿಸ್ತೃತ ವಾಸ್ತವ ಪರಿಸ್ಥಿತಿಯ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ನ್ಯಾಯಪೀಠ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
104 ಮಂದಿ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಗುತ್ತಿಗೆ ನೆಲೆಯ (Contract) ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.
ಈ ಪ್ರಕ್ರಿಯೆಯಲ್ಲಿ, 109 ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲಿಸಲಾಗಿದೆ. ಸಹಾಯಕ ಅಭಿಯೋಕರಿಗೆ ಹಿರಿಯ ಸರ್ಕಾರಿ ಅಭಿಯೋಜಕರನ್ನಾಗಿ ಭಡ್ತಿ ಯಾ ಪದೋನ್ನತಿ ನೀಡುವ ವಿಚಾರದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂಬುದನ್ನು ಸರ್ಕಾರರ ಪರ ವಕೀಲರು ವಾದಿಸಿದರು.
ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಆಡಳಿತಾತ್ಮಕ ಟ್ರಿಬ್ಯೂನಲ್ (KSAT) ಮೆಟ್ಟಿಲೇರಿದ್ದರು. ಆ ಅರ್ಜಿಯನ್ನು ಟ್ರಿಬ್ಯೂನಲ್ ವಜಾ ಮಾಡಿದೆ. ಔಪಚಾರಿಕ ಪ್ರಕ್ರಿಯೆ ಪಾಲಿಸಿ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅರಿಕೆ ಮಾಡಿದರು.
2023ರ ಫೆಬ್ರವರಿ 7ರಂದು ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಮಾಡಲಾಗಿದೆ. ಆ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಪೈಕಿ 109 ಅಭ್ಯರ್ಥಗಳ ದಾಖಲೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ವಿವರ ನೀಡಿದೆ.
ಸರ್ಕಾರಿ ಅಭಿಯೋಜಕರು ಮತ್ತು ಎಪಿಸಿ, ಎಜಿಪಿ ನೇಮಕಾತಿಯಲ್ಲಿ ಭಾರೀ ಅಕ್ರಮ, ಭ್ರಷ್ಟಾಚಾರ ನಡೆದಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರು.
ಈ ಬಗ್ಗೆ 10 ದಿನದ ಒಳಗಾಗಿ ವಿಸ್ತೃತವಾದ ವಿವರಗಳನ್ನು ಒಳಗೊಂಡ ವರದಿಯನ್ನು ನೀಡುವಂತೆ ಸಿಎಂ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದ್ದರು ಎಂಬುದು ಗಮನಾರ್ಹ.