ಕೃಷಿ ಭೂಮಿ ಪರಿವರ್ತನೆ ಇನ್ನು ಸರಳ: ತಿದ್ದುಪಡಿ ಮಸೂದೆಯಲ್ಲೇನಿದೆ..?
ಕೃಷಿ ಭೂಮಿ ಪರಿವರ್ತನೆ ಇನ್ನು ಸರಳ: ತಿದ್ದುಪಡಿ ಮಸೂದೆಯಲ್ಲೇನಿದೆ..?
ರಾಜ್ಯ ಸರ್ಕಾರದ ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ಮಸೂದೆ 2023ಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಇದರೊಂದಿಗೆ ಕೃಷಿಯೇತರ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಪರಿವರ್ತಿಸುವುದು ಇನ್ನು ಮುಂದೆ ಸರಳವಾಗಲಿದೆ.
ಕರ್ನಾಟಕ ರಾಜ್ಯ ಪತ್ರದಲ್ಲಿ ತಿದ್ದುಪಡಿ ಕಾಯ್ದೆಯನ್ನು ಪ್ರಕಟಿಸಲಾಗಿದ್ದು, ಈ ಕಾಯ್ದೆ ತಕ್ಷಣದಿಂದಲೇ ಜಾರಿಗೆ ಬಂದಿದೆ.
ಅರ್ಜಿದಾರರು ಸ್ವಯಂ ಘೋಷಣೆಯ ಮೂಲಕವೇ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿಯನ್ನು ಪರಿವರ್ತಿಸಲು ಈ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ.
ಕೃಷಿಯೇತರ ಉದ್ದೇಶಗಳಿಗಾಗಿ ಮಾಸ್ಟರ್ ಪ್ಲ್ಯಾನ್ ಮಾಡಲಾಗಿರುವ ಭೂಮಿಯನ್ನು ಈ ಮಾಸ್ಟರ್ ಪ್ಲ್ಯಾನ್‌ನಲ್ಲಿ ಉಲ್ಲೇಖಿಸಿರುವ ಉದ್ದೇಶಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಬೇಕಾಗಿಲ್ಲ. ಯಾವುದೇ ಮಾಸ್ಟರ್ ಪ್ಲ್ಯಾನ್ ಇಲ್ಲದ ಸ್ಥಳೀಯ ಯೋಜನಾ ಪ್ರದೇಶದ ಹೊರಗಿನ ಬೂಮಿಯನ್ನು ಪರಿವರ್ತನೆ ಮಾಡಿಕೊಳ್ಳಲು ಅರ್ಜಿದಾರರು ಪ್ರಮಾಣ ಪತ್ರ ಸಲ್ಲಿಸಬೇಕು.
30 ದಿನಗಳಲ್ಲಿ ಆದೇಶ ನೀಡದೇ ಇದ್ದರೆ ಭೂ ಪರಿವರ್ತನೆಯನ್ನು ಅನುಮೋದಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ.