ED ನಿರ್ದೇಶಕರ ಅಧಿಕಾರಾವಧಿ ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಅಡ್ಡಗಾಲು!
Tuesday, July 11, 2023
ED ನಿರ್ದೇಶಕರ ಅಧಿಕಾರಾವಧಿ ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಅಡ್ಡಗಾಲು!
ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠದ ತೀರ್ಪಿಗೆ ವಿರುದ್ಧವಾಗಿ ಜಾರಿ ನಿರ್ದೇಶನಾಲಯ (Enforcement Directorate) ದ ಹಾಲಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆಯನ್ನು ರದ್ದುಗೊಳಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾ. ಬಿ.ಆರ್. ಗವಾಯಿ, ವಿಕ್ರಮ್‌ನಾಥ್ ಮತ್ತು ಸಂಜಯ್ ಕರೋಲ್ ಅವರಿದ್ದ ತ್ರಿಸದಸ್ಯ ಪೀಠ ED ನಿರ್ದೇಶಕರ ಅಧಿಕಾರವಧಿ ವಿಸ್ತರಣೆಯನ್ನು ರದ್ದುಗೊಳಿಸಿದೆ.
ಮಾತ್ರವಲ್ಲ, ಕೇಂದ್ರದ ಈ ನಿರ್ಧಾರ 2021ರ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ.
ಈಗಿನ ನಿರ್ದೇಶಕರ ಅಧಿಕಾರಾವಧಿ ಜುಲೈ 31, 2023ಕ್ಕೆ ಕೊನೆಗೊಳ್ಳಲಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಬಯಸಿದರೂ ಅವರು ನಿವೃತ್ತರಾಗಲಿದ್ದಾರೆ.