HC Justice Transfer - ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ
ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ
ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲೀಜಿಯಂ ಶಿಫಾರಸು ಮಾಡಿದ ಎಂಟು ತಿಂಗಳ ಬಳಿಕ ಕೇಂದ್ರ ಸರ್ಕಾರ ಈ ವರ್ಗಾವಣೆ ಮಾಡಿದೆ.
ನ್ಯಾ. ಡಿ. ರಮೇಶ್ ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.
ನ್ಯಾ. ಲಲಿತಾ ಕನ್ನೆಗಂಟಿ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.
ನ್ಯಾ. ವಿಪುಲ್ ಎಂ ಪಾಂಚೋಲಿ ಅವರನ್ನು ಗುಜರಾತ್ ಹೈಕೋರ್ಟ್‌ನಿಂದ ಪಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾವ್ ಮೇಘವಾಲ್ ಟ್ವೀಟ್ ಮೂಲಕ ಈ ವರ್ಗಾವಣೆಯನ್ನು ಪ್ರಕಟಿಸಿದ್ದಾರೆ. ಈ ಮೂವರು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ 2022ರ ಸೆಪ್ಟಂಬರ್ 29ರಂದು ಸುಪ್ರೀಂ ಕೋರ್ಟ್ ಕೊಲೀಜಿಯಂ ಶಿಫಾರಸ್ಸು ಮಾಡಿತ್ತು.
ಈ ಮಧ್ಯೆ, ನ್ಯಾ. ವಿಪುಲ್ ಎಂ ಪಾಂಚೋಲಿ ಅವರನ್ನು ಗುಜರಾತ್ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿರುವುದನ್ನು ಗುಜರಾತ್ ಹೈಕೋರ್ಟ್ ವಕೀಲರ ಸಂಘ ವಿರೋದಿಸಿದೆ.