ಹೆದ್ದಾರಿ ಪ್ರಾಧಿಕಾರ ಕಾಯ್ದೆ: ಪರಿಹಾರ ವಿವಾದ ಮೂಲ ನ್ಯಾಯವ್ಯಾಪ್ತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಹೆದ್ದಾರಿ ಪ್ರಾಧಿಕಾರ ಕಾಯ್ದೆ: ಪರಿಹಾರ ವಿವಾದ ಮೂಲ ನ್ಯಾಯವ್ಯಾಪ್ತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯ್ದೆ ಅಡಿಯಲ್ಲಿ ಸಂತ್ರಸ್ತರಿಗೆ ಪರಿಹಾರ ಮೊತ್ತದ ಹಂಚಿಕೆಗೆ ಸಂಬಂಧಿಸಿದಂತೆ ಉದ್ಭವಿಸುವ ವಿವಾದವನ್ನು ಬಗೆಹರಿಸಲು ಮೂಲ ನ್ಯಾಯವ್ಯಾಪ್ತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆಯಾ ಪ್ರದೇಶದ ಸಿವಿಲ್ ನ್ಯಾಯಾಲಯಕ್ಕೆ ಮಾತ್ರ ಈ ಮೂಲ ನ್ಯಾಯವ್ಯಾಪ್ತಿ ಇದೆ ಎಂದು ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ಬಿ.ಆರ್. ಗವಾಯಿ ಅವರಿದ್ದ ನ್ಯಾಯಪೀಠ ತೀರ್ಪು ನೀಡಿದೆ.
ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ ಯಾವುದೇ ತಕರಾರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಇರುತ್ತದೆ. ಇದು ಅದರ ಮೂಲ ನ್ಯಾಯ ವ್ಯಾಪ್ತಿಯಾಗಿರುತ್ತದೆ ಎಂಬುದನ್ನು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.
ಹಾಗೆಯೇ, Mau ಜಿಲ್ಲಾ ದಂಡಾಧಿಕಾರಿಯವರು 16-01-2020ರಂದು ಹೊರಡಿಸಿದ ಆಧೇಶವನ್ನು ರದ್ದುಗೊಳಿಸಿ ಬದಿಗೆ ಸರಿಸಿದೆ. ಹಾಗೂ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿದೆ.
ವಿಶೇಷ ಭೂಸ್ವಾಧೀನಾಧಿಕಾರಿಗಳು ಇನ್ನು ಮುಂದೆ ತಮ್ಮ ಪರಿಹಾರ ಮೊತ್ತದ ವಿವಾದಗಳನ್ನು ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಕಾಯ್ದೆ 1956ರ ಸೆಕ್ಷನ್ 3(ಎಚ್) ಉಪ ಕಲಂ 4ರ ಅನ್ವಯ ಮೂಲ ನ್ಯಾಯವ್ಯಾಪ್ತಿಯಾಗಿ ಪ್ರಧಾನ ಸಿವಿಲ್ ನ್ಯಾಯಾಲಯ ಎಂಬುದಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
ಪ್ರಕರಣ: ವಿನೋದ್ ಕುಮಾರ್ Vs ಜಿಲ್ಲಾ ದಂಡಾಧಿಕಾರಿ MAU
ಸುಪ್ರೀಂ ಕೋರ್ಟ್ C.A. 5107/2022 Dated 07-07-2023
.