-->
NDPS : ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಅಧಿಕಾರ ಯಾರಿಗೆ..?- ಗೊಂದಲ ನಿವಾರಿಸಿದ ಕರ್ನಾಟಕ ಹೈಕೋರ್ಟ್‌ ತೀರ್ಪು

NDPS : ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಅಧಿಕಾರ ಯಾರಿಗೆ..?- ಗೊಂದಲ ನಿವಾರಿಸಿದ ಕರ್ನಾಟಕ ಹೈಕೋರ್ಟ್‌ ತೀರ್ಪು

NDPS : ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಅಧಿಕಾರ ಯಾರಿಗೆ..?- ಗೊಂದಲ ನಿವಾರಿಸಿದ ಕರ್ನಾಟಕ ಹೈಕೋರ್ಟ್‌ ತೀರ್ಪು





ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ(NDPS)ಯಡಿ ಜಪ್ತಿ ಮಾಡುವ ವಾಹನಗಳನ್ನು ಅವುಗಳ ಮಾಲಕರಿಗೆ ಮರಳಿ ನೀಡುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.



ಬೆಂಗಳೂರಿನ ಬನಶಂಕರಿ ನಿವಾಸಿಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.



ಇಂತಹ ಪ್ರಕರಣಗಳಲ್ಲಿ ವಾಹನ ಬಿಡುಗಡೆಗೊಳಿಸಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ಇದು ಪೊಲೀಸ್ ವ್ಯವಸ್ಥೆಯನ್ನು ಭ್ರಷ್ಟಾಚಾರಿಯನ್ನಾಗಿಸಲು ನಾಂದಿ ಹಾಡುತ್ತದೆ ಎಂದು ಅರ್ಜಿದಾರರ ಪರ ವಕೀಲರ ವಾದಿಸಿದರು.



ಮಾದಕ ವಸ್ತುಗಳ ಸಾಗಾಟಕ್ಕೆ ಬಳಿಸಿದ ಆರೋಪದಡಿ ಜಪ್ತಿ ಮಾಡಿದ ವಾಹನಗಳನ್ನು ಆದರ ನೈಜ ವಾರಿಸುದಾರರಿಗೆ ಮಧ್ಯಂತರ ಅವಧಿಯಲ್ಲಿ ವಾಪಸ್ ನೀಡುವ ಬಗ್ಗೆ ಕೇಂದ್ರದ ಅಧಿಸೂಚನೆಯಲ್ಲಿ ಸ್ಪಷ್ಟವಾದ ಯಾವುದೇ ವಿವರಗಳಿಲ್ಲ. ದೇಶದ ವಿವಿಧ ರಾಜ್ಯಗಳ 18 ಹೈಕೋರ್ಟ್‌ಗಳು ಈ ಕುರಿತು ನೀಡಿದ ತೀರ್ಪುಗಳ ಪ್ರಕಾರ, ಇಂತಹ ವಾಹನಗಳನ್ನು ಬಿಡುಗಡೆ ಮಾಡುವ ಅಧಿಕಾರ ವಿಚಾರಣಾ ನ್ಯಾಯಾಲಯಗಳಿಗೆ ಇದೆ ಎನ್ನುವುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.



ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, NDPS ಕಾಯ್ದೆಯಡಿ ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಅಧಿಕಾರ ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳಿಗೆ ಇದೆ ಎಂದು ಹೇಳಿದೆ.


ವಿಭಿನ್ನ ತೀರ್ಪು: ಬಗೆಹರಿದ ಗೊಂದಲ

ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಎರಡು ಏಕಸದಸ್ಯ ಪೀಠಗಳು ವಿಭಿನ್ನ ತೀರ್ಪು ನೀಡಿತ್ತು. ಇದು ಗೊಂದಲಕ್ಕೆ ಕಾರಣವಾಗಿತ್ತು.


NDPS ಕಾಯ್ದೆಯಡಿ ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಅಧಿಕಾರ ವಿಚಾರಣಾ ನ್ಯಾಯಾಲಯಗಳಿಗೆ ಇದೆ ಎಂದು ನ್ಯಾ. ಜಾನ್ ಮೈಕೆಲ್ ಡಿಕುನ್ಹಾ ಅವರಿದ್ದ ನ್ಯಾಯಪೀಠ ತೀರ್ಪು ನೀಡಿತ್ತು.


ಮತ್ತೊಂದು ಪ್ರಕರಣದಲ್ಲಿ ನ್ಯಾ. ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ಪೀಠ, NDPS ಕಾಯ್ದೆಯಡಿ ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಪೊಲೀಸ್ ನೇತೃತ್ವದ ವಿಲೇವಾರಿ ಸಮಿತಿಗೆ ಇದೆ ಎಂದು ತೀರ್ಪು ನೀಡಿತ್ತು.


ಈ ವಿಭಿನ್ನ ತೀರ್ಪುಗಳ ಬಳಿಕ ಉಂಟಾದ ಗೊಂದಲ ನಿವಾರಿಸಲು ವಿಭಾಗೀಯ ಪೀಠ ರಚಿಸಲಾಗಿತ್ತು. 


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200