-->
ಕೋವಿಡ್ ನಿಯಂತ್ರಣ, ನಿರ್ವಹಣೆಯಲ್ಲಿ ಭಾರೀ ಅಕ್ರಮ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ

ಕೋವಿಡ್ ನಿಯಂತ್ರಣ, ನಿರ್ವಹಣೆಯಲ್ಲಿ ಭಾರೀ ಅಕ್ರಮ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ

ಕೋವಿಡ್ ನಿಯಂತ್ರಣ, ನಿರ್ವಹಣೆಯಲ್ಲಿ ಭಾರೀ ಅಕ್ರಮ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ





2020 ಮತ್ತು 2021ರಲ್ಲಿ ಕೋವಿಡ್ ಸೋಂಕಿನ ನಿಯಂತ್ರಣ ಮತ್ತು ನಿರ್ವಹಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಅಕ್ರಮಗಳ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ.



ಈ ಆಯೋಗದ ಮುಖ್ಯಸ್ಥರನ್ನಾಗಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ'ಕುನ್ಹಾ ಅವರನ್ನು ನೇಮಿಸುವ ಸಾಧ್ಯತೆಗಳು ದಟ್ಟವಾಗಿದೆ.



ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು. ಆಯೋಗದ ಕಾರ್ಯವ್ಯಾಪ್ತಿ ಮತ್ತು ಇತರ ಅಂಶಗಳ ಬಗ್ಗೆಯೂ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ.


ಈ ಹಗರಣದಲ್ಲಿ 2000 ಕೋಟಿ ರೂಪಾಯಿಗೂ ಹೆಚ್ಚಿನ ಸಾರ್ವಜನಿಕ ಸಂಪತ್ತನ್ನು ರಾಜಕಾರಣಿಗಳು ಲೂಟಿ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಸದನದಲ್ಲಿ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಲ್ಲದೆ ಹಗರಣವನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದರು.


ಹಿಂದಿನ ಸರ್ಕಾರದಲ್ಲಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಲ್ಲಿದ್ದ ಎಚ್.ಕೆ. ಪಾಟೀಲ್ ಸಮಗ್ರ ತನಿಖೆಗೆ ಆಗಿನ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಒತ್ತಾಯ ಮಾಡಿದ್ದರು. ಆದರೆ, ಅವರು ತನಿಖೆಗೆ ಮನಸ್ಸು ಮಾಡಿರಲಿಲ್ಲ.


ಮೈಖಲ್ ಡಿಸೋಜ ಕುರಿತು...

ಮಂಗಳೂರು ಹೊರವಲಯದ ಗುರುಪುರ ಮೂಲದ ಮೈಕಲ್ ಡಿಕುನ್ಹಾ ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ತಮ್ಮ ಕಾನೂನು ಪದವಿ ಪಡೆದುಕೊಂಡು ಮಂಗಳೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು.


2002ರಲ್ಲಿ ಡಿಸ್ಟ್ರಿಕ್ಟ್ ಜಡ್ಜ್ ಆಗಿ ನೇಮಕವಾದ ಅವರು, 2016ರಿಂದ 2021ರ ವರೆಗೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ, ಆಪರೇಷನ್ ಕಮಲ ಪ್ರಕರಣ, ಉಮಾಭಾರತಿ ವಿರುದ್ಧದ ಈದ್ಗಾ ಧ್ವಜಾರೋಹಣ ಪ್ರಕರಣಗಳನ್ನು ಇತ್ಯರ್ಥ ಮಾಡಿ ಡಿಕುನ್ಹ ಖ್ಯಾತಿ ಪಡೆದಿದ್ದರು.


Ads on article

Advertise in articles 1

advertising articles 2

Advertise under the article