-->
ಸರ್ಕಾರಿ ನೌಕರರ ವಿರುದ್ಧ ಪ್ರಕರಣ, ದೂರು ದಾಖಲು ಮಾಡಲು ಇಲಾಖೆ ಅನುಮತಿ ಕಡ್ಡಾಯವೇ..? ಸುಪ್ರೀಂ ಕೋರ್ಟ್ ಹೇಳಿದ್ದೆನು..?

ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಸರ್ಕಾರಿ ನೌಕರ ಯಾ ಸಾರ್ವಜನಿಕ ಸೇವಕರ ವಿರುದ್ಧ ಪ್ರಕರಣ, ದೂರು ದಾಖಲು ಮಾಡಲು ಇಲಾಖೆ ಅನುಮತಿ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ನ್ಯಾ. ಬಿ. ಆರ್. ಗವಾಯಿ ಮತ್ತು ನ್ಯಾ. ಜೆ.ಬಿ. ಪರ್ಡಿವಾಲಾ ಅವರಿದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಆದರೆ, ಸಾರ್ವಜನಿಕ ಸೇವಕರ ವಿರುದ್ಧ ಸಾಮಾನ್ಯ ದಂಡ ಕಾನೂನಿನ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಇಲಾಖಾ ಅನುಮತಿ ಅವಶ್ಯಕತೆಗೆ ಅನುಗುಣವಾಗಿ ಇರುತ್ತದೆ. ಅಲ್ಲಿ ವಾಸ್ತವಿಕ ಅಂಶಗಳನ್ನು ಅವಲಂಬಿಸಿ ಅನುಮತಿಯ ಅಗತ್ಯ ಇರುತ್ತದೆ ಎಂದು ನ್ಯಾಯಪೀಠ ವಿವರಿಸಿದೆ.

ಇದೇ ವೇಳೆ, ಭ್ರಷ್ಟಾಚಾರ ತಡೆ ಕಾಯ್ದೆ-1988 ಸೆಕ್ಷನ್ 19ರ ಅಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ದೂರು ನೀಡುವಾಗ ಇಲಾಖಾ ಮುಖ್ಯಸ್ಥರ ಅನುಮತಿ ಕಡ್ಡಾಯ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ವಿವರಿಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿಯಲ್ಲಿ ಅನುಮತಿ ನೀಡದ ಕಾರಣ, ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಮಾತ್ರ ಅಪರಾಧಗಳಿಗೆ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಪೀಠ ಮೇಲ್ಮನವಿದಾರ ಎ. ಶ್ರೀನಿವಾಸ ರೆಡ್ಡಿ ಅವರ ಅರ್ಜಿಯನ್ನು ತಿರಸ್ಕರಿಸಿತು.

Ads on article

Advertise in articles 1

advertising articles 2

Advertise under the article