-->
ಸುಳ್ಳು ಜಾತಿ ಪ್ರಮಾಣಪತ್ರದಿಂದ ಪಡೆದ ನೌಕರಿ: ಆರೋಪಿಗೆ ಯಾವುದೇ ರಕ್ಷಣೆ ಇಲ್ಲ ಎಂದ ಸುಪ್ರೀಂ ಕೋರ್ಟ್

ಸುಳ್ಳು ಜಾತಿ ಪ್ರಮಾಣಪತ್ರದಿಂದ ಪಡೆದ ನೌಕರಿ: ಆರೋಪಿಗೆ ಯಾವುದೇ ರಕ್ಷಣೆ ಇಲ್ಲ ಎಂದ ಸುಪ್ರೀಂ ಕೋರ್ಟ್

ಸುಳ್ಳು ಜಾತಿ ಪ್ರಮಾಣಪತ್ರದಿಂದ ಪಡೆದ ನೌಕರಿ: ಆರೋಪಿಗೆ ಯಾವುದೇ ರಕ್ಷಣೆ ಇಲ್ಲ ಎಂದ ಸುಪ್ರೀಂ ಕೋರ್ಟ್

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದರೆ, ಅಂತಹ ಸರ್ಕಾರಿ ನೌಕರರಿಗೆ ಯಾವುದೇ ರಕ್ಷಣೆ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.


ಜಾತಿ ಪ್ರಮಾಣಪತ್ರವನ್ನು ಮೋಸದಿಂದ ಪಡೆದು ಸಲ್ಲಿಸಲಾಗಿದೆಯೇ ಅಥವಾ ನಿಜವಾದ ತಪ್ಪು ಗ್ರಹಿಕೆಯಿಂದ ಪಡೆದು ಸಲ್ಲಿಸಲಾಗಿದೆಯೇ ಎಂಬುದು ಇಲ್ಲಿ ನಗಣ್ಯವಾಗಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ ಮಧುಮಿತಾ ದಾಸ್ ಎಂಬವರನ್ನು ಉದ್ಯೋಗದಲ್ಲಿ ಮುಂದುವರಿಸುವಂತೆ ಒಡಿಶಾ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಭುವನೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಪರ್ಡಿವಾಲಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.ಮೀಸಲು ಹುದ್ದೆಗಳನ್ನು ಅರ್ಹರಿಗೆ ಮಾತ್ರ ನೀಡಬೇಕು. ಒಂದು ವೇಳೆ, ಅನರ್ಹ ವ್ಯಕ್ತಿಗೆ ನೀಡಿದರೆ ಅರ್ಹ ವ್ಯಕ್ತಿಯ ಅವಕಾಶವನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಹೇಳಿರುವ ಸುಪ್ರೀಂಕೋರ್ಟ್, ಈ ಪ್ರಮಾದ ಗಮನಕ್ಕೆ ಬಂದ ನಂತರವೂ ರಕ್ಷಣೆ ನೀಡಿದರೆ ಅಕ್ರಮವನ್ನು ಶಾಶ್ವತಗೊಳಿಸಿದಂತಾತ್ತದೆ ಎಂದು ಹೇಳಿದೆ.ಸುಳ್ಳು ಜಾರಿ ಸರ್ಟಿಫಿಕೇಟ್ ಆಧಾರದಲ್ಲಿ ಉದ್ಯೋಗ: ನೇಮಕಾತಿಯ ಲಾಭ ಉಳಿಸಿಕೊಳ್ಳಲು ಅನುಮತಿ ನೀಡಲಾಗದು: ಸುಪ್ರೀಂ ಕೋರ್ಟ್‌ನಕಲಿ ದಾಖಲೆಯಲ್ಲಿ ಸರ್ಕಾರಿ ಕೆಲಸ ಪಡೆದಿದ್ದರೆ...: ಸರ್ಕಾರಿ ಆದೇಶ ಏನು ಹೇಳುತ್ತದೆ?


ಪ್ರಕರಣದ ವಿವರ:

ಮಧುಮಿತಾ ದಾಸ್ ಅವರು ಜನ್ಮತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಅವರು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯನ್ನು ಮದುವೆಯಾಗಿದ್ದರು. 


ಬಳಿಕ ತನಗೂ ಪರಿಶಿಷ್ಟ ಜಾತಿ ಅನ್ವಯಿಸುತ್ತದೆ ಎಂದು ತಹಶೀಲ್ದಾರ್ ಅವರಿಂದ ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದರು. ಇದೇ ಆಧಾರದಲ್ಲಿ ಭುವನೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಎಸ್‌ಸಿ ಸಮುದಾಯಕ್ಕೆ ಮೀಸಲಾಗಿದ್ದ ಹುದ್ದೆಗೆ ಅದೇ ಮೀಸಲಾತಿ ಆಧಾರದಲ್ಲಿ ನೇಮಕಾತಿ ಹೊಂದಿದ್ದರು.2011ರಲ್ಲಿ ಅವರ ವಿರುದ್ಧ ಸುಳ್ಳು ಜಾಥಿ ಪ್ರಮಾಣಪತ್ರ ಸಲ್ಲಿಸಿದ್ದ ಆರೋಪದಲ್ಲಿ ಶಿಸ್ತು ಪ್ರಾಧಿಕಾರವು ಕ್ರಮ ಜರುಗಿಸಿತ್ತು. 2012ರಲ್ಲಿ ವಿಚಾರಣೆ ಬಳಿಕ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಮಧ್ಯೆ, ತಹಶೀಲ್ದಾರ್ ಅವರು ಮಧುಮಿತಾ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿದ್ದರು.ಶಿಸ್ತು ಪ್ರಾಧಿಕಾರದ ವಜಾ ಆದೇಶವನ್ನು ಪ್ರಶ್ನಿಸಿ ಮಧುಮಿತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಅರ್ಜಿದಾರರು ಮೋಸದಿಂದ ಜಾತಿ ಪ್ರಮಾಣಪತ್ರವನ್ನು ಪಡೆದಿಲ್ಲ. ಹೀಗಾಗಿ ಹುದ್ದೆ ಖಾಲಿ ಇದ್ದರೆ ಮುಂದುವರಿಸುವ ಕುರಿತು ಪರಿಶೀಲಿಸಬೇಕು ಎಂದು ಪ್ರಾಧಿಕಾರಕ್ಕೆ ಆದೇಶ ನೀಡಿತ್ತು.ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಾಧಿಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಪ್ರಾಧಿಕಾರದ ಅರ್ಜಿಯನ್ನು ಸುಪ್ರೀಂ ಪುರಸ್ಕರಿಸಿದೆ.

Ads on article

Advertise in articles 1

advertising articles 2

Advertise under the article