23 ನ್ಯಾಯಮೂರ್ತಿಗಳ ವರ್ಗಾವಣೆ: ಕೊಲೀಜಿಯಂ ಶಿಫಾರಸ್ಸು
Friday, August 11, 2023
23 ನ್ಯಾಯಮೂರ್ತಿಗಳ ವರ್ಗಾವಣೆ: ಕೊಲೀಜಿಯಂ ಶಿಫಾರಸ್ಸು
ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ 23 ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವ ಕುರಿತು ಕೊಲೀಜಿಯಂ ಶಿಫಾರಸ್ಸು ಮಾಡಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಜಿ. ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಲಾಗಿದೆ.
ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಲಾಗಿತ್ತು. ಆದರೆ, ಅ ಬಳಿಕ ಸುಮಲತಾ ಅವರ ಕೋರಿಕೆಯ ಮೇರೆಗೆ ಕರ್ನಾಟಕಕ್ಕೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಲಾಗಿದೆ.
ಮೋದಿ ಉಪನಾಮ ಕುರಿತ 2019ರ ರಾಹುಲ್ ಗಾಂಧಿ ಹೇಳಿಕೆ ಕುರಿತು ರಾಹುಲ್ ಅರ್ಜಿಯನ್ನು ವಜಾಗೊಳಿಸಿ ಶಿಕ್ಷೆ ಖಾಯಂಗೊಳಿಸಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಎಂ. ಪ್ರಚ್ಛಕ್ ಅವರನ್ನೂ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿದೆ.