ಶುಗರ್ ಇದೆ ಎಂಬ ಕಾರಣಕ್ಕೆ ಜೀವನಾಂಶದಿಂದ ತಪ್ಪಿಸಲಾಗದು: ಕರ್ನಾಟಕ ಹೈಕೋರ್ಟ್
Tuesday, August 22, 2023
ಶುಗರ್ ಇದೆ ಎಂಬ ಕಾರಣಕ್ಕೆ ಜೀವನಾಂಶದಿಂದ ತಪ್ಪಿಸಲಾಗದು: ಕರ್ನಾಟಕ ಹೈಕೋರ್ಟ್
ತನಗೆ ಶುಗರ್ ಇದೆ ಎಂಬ ಕಾರಣಕ್ಕೆ ಪತ್ನಿಗೆ ನೀಡಬೇಕಾಗಿರುವ ಜೀವನಾಂಶದಿಂದ ತಪ್ಪಿಸಿಕೊಳ್ಳಲಾಗದು ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬೆಂಗಳೂರಿನ ಅನಂತ್ ಕುಮಾರ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಈಗ ವಿಜ್ಞಾನ ಸಾಕಷ್ಟು ಪ್ರಗತಿ ಸಾಧಿಸಿದೆ. ಮಧುಮೇಹದಂತಹ ಖಾಯಿಲೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬಹುದಾಗಿದೆ. ಸೂಕ್ತ ವೈದ್ಯಕೀಯ ಆರೈಕೆ ಇದ್ದರೆ ಈ ಖಾಯಿಲೆಯನ್ನು ನಿಯಂತ್ರಿಸಬಹುದು ಎಂದು ಹೈಕೋರ್ಟ್ ಗಮನಿಸಿದೆ.
ಆದರೆ, ಮಧುಮೇಹ ಇದೆ ಎಂಬ ಕಾಋಣಕ್ಕೆ ಜೀವನಾಂಶದ ಪಾವತಿಯಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ನ್ಯಾಯಪೀಠ ಹೇಳಿದೆ.