-->
ಸರ್ಕಾರಿ ಭೂಮಿ ಒತ್ತುವರಿ: ತಡೆಯದ ಅಧಿಕಾರಿ ವಿರುದ್ಧ ಕಾನೂನು ಕ್ರಮ- ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸರ್ಕಾರಿ ಭೂಮಿ ಒತ್ತುವರಿ: ತಡೆಯದ ಅಧಿಕಾರಿ ವಿರುದ್ಧ ಕಾನೂನು ಕ್ರಮ- ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸರ್ಕಾರಿ ಭೂಮಿ ಒತ್ತುವರಿ: ತಡೆಯದ ಅಧಿಕಾರಿ ವಿರುದ್ಧ ಕಾನೂನು ಕ್ರಮ- ಸರ್ಕಾರಕ್ಕೆ ಹೈಕೋರ್ಟ್‌ ಆದೇಶ
ಯಾವುದೇ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭೂಮಿಯ ಒತ್ತುವರಿ ತೆರವು ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಹಿಂದೆ-ಮುಂದೆ ನೋಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ.


ಸರ್ಕಾರಿ ಭೂಮಿ ಒತ್ತುವರಿ ತೆರವು ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.


ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವಿನ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಕೇವಲ ಬಟ್ಟೆಯ ಒಂದು ಎಳೆ ಮಾತ್ರ. ಬೆಂಗಳೂರಿನಲ್ಲಿ ಮತ್ತು ರಾಜ್ಯದಲ್ಲಿ ಇಂತಹ ನೂರಾರು ಪ್ರಕರಣಗಳೀವೆ. ಅವುಗಳ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆಯ ಕುರಿತು ಸರ್ಕಾರ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಕ್ರಮ ಕೈಗೊಂಡ ಬಗ್ಗೆ ನಾಲ್ಕು ವಾರಗಳಲ್ಲಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠ ಆದೇಶ ಮಾಡಿತು.


Ads on article

Advertise in articles 1

advertising articles 2

Advertise under the article