
ಪೊಲೀಸರ ಗುಂಪು ವಿಮೆ ಮೊತ್ತದಲ್ಲಿ ಭಾರೀ ಏರಿಕೆ: ಸರ್ಕಾರದ ಪ್ರಕಟಣೆ
ಪೊಲೀಸರ ಗುಂಪು ವಿಮೆ ಮೊತ್ತದಲ್ಲಿ ಭಾರೀ ಏರಿಕೆ: ಸರ್ಕಾರದ ಪ್ರಕಟಣೆ
ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತದಲ್ಲಿ ಭಾರೀ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿಯನ್ನು ನೀಡಿದೆ.
ಬೆಂಗಳೂರು ನಗರ ಮೀಸಲು ಪೊಲೀಸ್ ಪಡೆಯ ಮೈದಾನದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಆರೋಗ್ಯ ಭಾಗ್ಯಕ್ಕಾಗಿ ರೂ. 100 ಕೋಟಿ ಅನುದಾನವನ್ನು ಸರ್ಕಾರ ಒದಗಿಸಿದೆ. ಅದೇ ರೀತಿ, ನಿವೃತ್ತರ ಆರೋಗ್ಯ ಸೇವೆಗಾಗಿ ನಿಶ್ಚಿತ ಠೇವಣಿ ಇರಿಸಲಾಗಿದೆ.
ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಏಳು ಪೊಲೀಸ್ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.