-->
ಜಡ್ಜ್‌ ಸಾಹೇಬರೇ ಹೇಳಿದರೂ ಚಿಕಿತ್ಸೆ ನೀಡದ ವೈದ್ಯೆ ಸಹಿತ ಮೂವರ ವಿರುದ್ಧ ಎಫ್‌ಐಆರ್‌

ಜಡ್ಜ್‌ ಸಾಹೇಬರೇ ಹೇಳಿದರೂ ಚಿಕಿತ್ಸೆ ನೀಡದ ವೈದ್ಯೆ ಸಹಿತ ಮೂವರ ವಿರುದ್ಧ ಎಫ್‌ಐಆರ್‌

ಜಡ್ಜ್‌ ಸಾಹೇಬರೇ ಹೇಳಿದರೂ ಚಿಕಿತ್ಸೆ ನೀಡದ ವೈದ್ಯೆ ಸಹಿತ ಮೂವರ ವಿರುದ್ಧ ಎಫ್‌ಐಆರ್‌






ಸ್ವತಃ ಜಡ್ಜ್ ಸಾಹೇಬರೇ ಆಸ್ಪತ್ರೆಗೆ ಬಂದು ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ದಾಖಲಿಸುವಂತೆ ಸೂಚಿಸಿದರೂ 12 ವರ್ಷದ ಮಗುವಿನ ಸಾವಿಗೆ ಕಾರಣರಾದ ಆಸ್ಪತ್ರೆಯ ವೈದ್ಯೆ ಡಾ. ಚೈತ್ರಾ ಸಹಿತ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.



12 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿಕೊಳ್ಳದೆ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿ ನ್ಯಾಯಾಧೀಶರು ನೀಡಿದ ದೂರಿನ ಮೇರೆಗೆ ಸರ್ಕಾರಿ ಮಕ್ಕಳ ಆಸ್ಪತ್ರೆಯ ವೈದ್ಯೆ ಸಹಿತ ಮೂವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.



ಮೈಸೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ. ಶಿಲ್ಪಾ ಅವರು ನೀಡಿದ ದೂರಿನ ಆಧಾರದಲ್ಲಿ ಈ ದೂರು ದಾಖಲಿಸಿಕೊಳ್ಳಲಾಗಿದೆ.



ಘಟನೆಯ ವಿವರ

ಕೊಡಗು ಮೂಲದ ದಂಪತಿಯ 12 ವರ್ಷದ ಪುತ್ರಿಗೆ ಶ್ವಾಸಕೋಶ ಮತ್ತು ಉಸಿರಾಟದ ಸಮಸ್ಯೆ ಇತ್ತು. ಈ ಕಾರಣ ಮಗಳನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.


ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿ ಇದ್ದ ಡಾ. ಚೈತ್ರಾ ಅವರು ಇಲ್ಲಿ ಬೆಡ್ ಇಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಸೂಚಿಸಿದ್ದರು. ಖಾಶಗಿ ಆಸ್ಪತ್ರೆಯಲ್ಲಿ ದಿನಕ್ಕೆ 25ರಿಂದ 30 ಸಾವಿರ ರೂ. ಖರ್ಚಾಗುತ್ತದೆ ಎಂದು ಹೇಳಿದ ಕಾರಣ ಬಡ ದಂಪತಿ ಮತ್ತೆ ಸರ್ಕಾರಿ ಆಸ್ಪತ್ರೆಗೆ ಕರೆತಂದರು. ಈ ಸಂದರ್ಭದಲ್ಲಿ ಸ್ವಗ್ರಾಮದವರಾದ ಹಿನ್ನೆಲೆಯಲ್ಲಿ ಸ್ವತಃ ನ್ಯಾಯಾಧೀಶರೇ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯನ್ನು ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಹೇಳಿದ್ದರು. 


ಕೊನೆಗೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿಕೊಳ್ಳಲಾಗಿತ್ತು. ನವೆಂಬರ್ 4ರಂದು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಳು.



ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶಿಲ್ಪಾ ಸಕಾಲದಲ್ಲಿ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಮಾಡಿದ್ದ ವೈದ್ಯೆ ಡಾ. ಚೈತ್ರಾ ಅವರ ವಿರುದ್ಧ ದೇವರಾಜ ಪೊಲೀಸ್ ಠಾಣೆ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಆದರೆ, ವೈದ್ಯೆ ಮತ್ತು ಇತರ ಇಬ್ಬರ ವಿರುದ್ಧ ದೂರು ದಾಖಲಿಸಲಾಗೆ ಎಂದು ಕಾನೂನು ಸುವ್ಯವಸ್ಥೆಯ ಡಿಸಿಪಿ ಮುತ್ತುರಾಜ್ ಮಾಹಿತಿ ನೀಡಿದ್ದಾರೆ.


Ads on article

Advertise in articles 1

advertising articles 2

Advertise under the article