-->
ಸರ್ಕಾರಿ ನೌಕರರ ವೇತನ ಪರಿಷ್ಕರಣೆ- ನೌಕರರ ಸಂಘದ ಮನವಿಗೆ ಸರ್ಕಾರದ ಪ್ರತಿಕ್ರಿಯೆ ಏನು..?

ಸರ್ಕಾರಿ ನೌಕರರ ವೇತನ ಪರಿಷ್ಕರಣೆ- ನೌಕರರ ಸಂಘದ ಮನವಿಗೆ ಸರ್ಕಾರದ ಪ್ರತಿಕ್ರಿಯೆ ಏನು..?

ಸರ್ಕಾರಿ ನೌಕರರ ವೇತನ ಪರಿಷ್ಕರಣೆ- ನೌಕರರ ಸಂಘದ ಮನವಿಗೆ ಸರ್ಕಾರದ ಪ್ರತಿಕ್ರಿಯೆ ಏನು..?




ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿ ಇದ್ದಾರೆ. ಇದರ ಮಧ್ಯದಲ್ಲೇ ಏಳನೇ ವೇತನ ಆಯೋಗದ ಗಡುವು ಮುಕ್ತಾಯವಾಗಲಿದೆ.


ಅವಧಿ ವಿಸ್ತರಣೆಗೆ ಆರ್ಥಿಕ ಇಲಾಖೆಯು ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ಸಮಯ ತಗಲುವ ಸಾಧ್ಯತೆ ಇದೆ.


ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ನಾಗರಿಕ ಸಮಾಜದ ಕಲ್ಯಾಣ ಯೋಜನೆಗಳು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಾದ ಅನಿವಾರ್ಯತೆಯೂ ಸರ್ಕಾರದ ಮುಂದಿದೆ.


ಏಪ್ರಿಲ್ 1ರಿಂದ ಅನ್ವಯವಾಗುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ತುಟ್ಟಿಭತ್ಯೆ ಏರಿಕೆಯಾಗಿ ಈಗಾಗಲೇ ಸರ್ಕಾರ ಘೋಷಿಸಿದೆ. ಹಾಗಾಗಿ, ಇದು ನೌಕರರಿಗೆ ದೊಡ್ಡ ಸಮಸ್ಯೆಯಾಗದು.


ಮಧ್ಯಮಾವಧಿ ವಿತ್ತೀಯ ಯೋಜನೆ ಪ್ರಕಾರ ವೇತನ ಪರಿಷ್ಕರಣೆಗೆ ವಾರ್ಷಿಕ 12 ಸಾವಿರ ಕೋಟಿಯಿಂದ 18 ಸಾವಿರ ಕೋಟಿ ಅಗತ್ಯವಿದೆ. ಬಜೆಟ್‌ನಲ್ಲಿ ನಿರೀಕ್ಷಿಸಿದ್ದ ಆದಾಯ ಸಂಗ್ರಹವೂ ಪ್ರಗತಿಯಲ್ಲಿದ್ದು, ಗುರಿ ತಲುಪಲು ಇನ್ನಷ್ಟು ಕಾಲ ಬೇಕಾಗಿದೆ. ಹಾಗಾಗಿ, ವೇತನ ಆಯೋಗದ ಅವಧಿ ವಿಸ್ತರಿಸುವ ಅಗತ್ಯವಿದೆ ಎಂದು ಸಿಎಂ ಅವರಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.



Ads on article

Advertise in articles 1

advertising articles 2

Advertise under the article