ವಕೀಲರ ಮೇಲೆ ಹಲ್ಲೆ: ಆರು ಪೊಲೀಸರು ಸಸ್ಫೆಂಡ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್
ವಕೀಲರ ಮೇಲೆ ಹಲ್ಲೆ: ಆರು ಪೊಲೀಸರು ಸಸ್ಫೆಂಡ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್
ಚಿಕ್ಕಮಗಳೂರಿನ ವಕೀಲರಾದ ಪ್ರೀತಂ ಅವರ ಮೇಲಿನ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಪೊಲೀಸರ ಮೇಲಿನ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ತುರ್ತು ವಿಚಾರಣೆ ನಡೆಸಿತು.
ಸರ್ಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್, ಆರು ಮಂದಿ ಪೊಲೀಸರು ಸಸ್ಪೆಂಡ್ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದರು. ಅಲ್ಲದೆ, ಅತ್ಯಂತ ಕಡಿಮೆ ಅವಧಿಯಲ್ಲಿ ಕ್ಷಿಪ್ರ ಕ್ರಮ ಕೈಗೊಂಡು ತನಿಖೆ ನಡೆಸಲಾಗಿದೆ ಎಂದು ಮೆಮೋದಲ್ಲಿ ನ್ಯಾಯಪೀಠಕ್ಕೆ ನಿವೇದಿಸಿಕೊಂಡರು.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.
ಅಗತ್ಯ ಮಾಹಿತಿಯನ್ನು ನ್ಯಾಯಪೀಠಕ್ಕೆ ಒದಗಿಸುವಂತೆ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದ ನ್ಯಾಯಪೀಠ, ಪ್ರಕರಣವನ್ನು ಮಂಗಳವಾರಕ್ಕೆ ಮುಂದೂಡಿತು.