ಸಿವಿಲ್ ನ್ಯಾಯಾಲಯದ ಅಧಿಕಾರ ವ್ಯಾಪ್ತಿಗೆ ತಿದ್ದುಪಡಿ: ಈಗಿರುವ ಪ್ರಕರಣಗಳ ಕಥೆಯೇನು..?
Thursday, December 14, 2023
ಸಿವಿಲ್ ನ್ಯಾಯಾಲಯದ ಅಧಿಕಾರ ವ್ಯಾಪ್ತಿಗೆ ತಿದ್ದುಪಡಿ: ಈಗಿರುವ ಪ್ರಕರಣಗಳ ಕಥೆಯೇನು..?
ಕಿರಿಯ ಸಿವಿಲ್ ನ್ಯಾಯಾಲಯದ ವಿತ್ತೀಯ ಅಧಿಕಾರ ವ್ಯಾಪ್ತಿಯನ್ನು ಈಗಿರುವ ಐದು ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸಿ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.
ಈಗ ಎದ್ದಿರುವ ಪ್ರಶ್ನೆ ಏನೆಂದರೆ, ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿ ವಿಚಾರಣಾ ಹಂತದಲ್ಲಿ ಇರುವ ದಾವೆಗಳನ್ನು ಕಿರಿಯ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗುತ್ತದೆಯೆ..?
ಕರ್ನಾಟಕ ಸಿವಿಲ್ ನ್ಯಾಯಾಲಯದ ಕಾಯ್ದೆಗೆ ತರಲಾದ ತಿದ್ದುಪಡಿ 12-12-2023ಕ್ಕೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿ ವಿಚಾರಣೆಯ ಹಂತದಲ್ಲಿ ಇರುವ ದಾವೆಗಳನ್ನು ಕಿರಿಯ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗುವುದಿಲ್ಲ.