-->
ಪೊಲೀಸರಿಗೆ ದಂಡದ ಮೊತ್ತ ನಿರ್ಧರಿಸುವ, ದಂಡ ವಸೂಲಿಯ ಅಧಿಕಾರವಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು

ಪೊಲೀಸರಿಗೆ ದಂಡದ ಮೊತ್ತ ನಿರ್ಧರಿಸುವ, ದಂಡ ವಸೂಲಿಯ ಅಧಿಕಾರವಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು

ಪೊಲೀಸರಿಗೆ ದಂಡದ ಮೊತ್ತ ನಿರ್ಧರಿಸುವ, ದಂಡ ವಸೂಲಿಯ ಅಧಿಕಾರವಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು




ಸಂಚಾರಿ ನಿಯಮ ಉಲ್ಲಂಘನೆ ಆರೋಪದಲ್ಲಿ ದಂಡದ ಮೊತ್ತವನ್ನು ನಿರ್ಧರಿಸುವ ಅಧಿಕಾರ ಪೊಲೀಸರಿಗೆ ಇಲ್ಲ. ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಸಂಚಾರಿ ಪೊಲೀಸರು ಆರೋಪಿಗಳಿಂದ ದಂಡದ ಮೊತ್ತವನ್ನು ವಸೂಲಿ ಮಾಡಲು ಸಾಧ್ಯವಿಲ್ಲ ಎಂಬುದಾಗಿ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಹೆಲ್ಮಟ್ ಧರಿಸದೆ ಇರುವುದಕ್ಕೆ ದಂಡ ಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ. ನಟರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ವಾಹನ ತಪಾಸಣಾ ಚಟುವಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿಯನ್ನು ತಡೆಯಬೇಕು. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸರನ್ನು ಕರೆಸಿ ಆರೋಪಿಯನ್ನು ಅವರ ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಈ ಯಾವುದೇ ಮಾನದಂಡ, ನಿಯಮವನ್ನು ಸದ್ರಿ ಈ ಪ್ರಕರಣದಲ್ಲಿ ಪಾಲಿಸಿಲ್ಲ ಎಂಬುದನ್ನು ಗಮನಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿತು. 

Ads on article

Advertise in articles 1

advertising articles 2

Advertise under the article