-->
ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಹ ವಕೀಲರಿಂದ ಅರ್ಜಿ ಆಹ್ವಾನ

ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಹ ವಕೀಲರಿಂದ ಅರ್ಜಿ ಆಹ್ವಾನ

ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಹ ವಕೀಲರಿಂದ ಅರ್ಜಿ ಆಹ್ವಾನ

ಸರ್ಕಾರದ ಆದೇಶ ಮತ್ತು ಕಾನೂನು ಇಲಾಖೆಯ ಅಧಿಸೂಚನೆಯ ಮೇರೆಗೆ ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ನಿಟ್ಟಿನಲ್ಲಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.


ರಾಜ್ಯದಲ್ಲಿ ಕಾನೂನು ಪದವಿ ಪಡೆದು ವಕೀಲ ವೃತ್ತಿ ಆರಂಭಿಸುವ ನವ ಕಾನೂನು ಪದವೀಧರರಿಗೆ 2023-24ನೇ ಸಾಲಿಗೆ ಪ್ರೋತ್ಸಾಹ ಧನ ನೀಡುವ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಈ ಪ್ರಕಾರವಾಗಿ, ರಾಜ್ಯದ ಎಲ್ಲ ಜಿಲ್ಲೆಗಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಯ ಆಯ್ಕೆ ಸಮಿತಿ ಇವರಿಗೆ ನಿಗದಿತ ನಮೂನೆಯಲ್ಲಿ ಷರತ್ತು ಮತ್ತು ಮಾರ್ಗಸೂಚಿಗೊಳಪಡಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.


ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024


ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ 1-06-2022ರಿಂದ 31-05-2023ರ ಅವಧಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿಕೊಂಡಿರಬೇಕು.


ಈ ಯೋಜನೆಯಡಿ ಪ್ರೋತ್ಸಾಹಧನ ಮೊತ್ತ ಪ್ರತಿ ತಿಂಗಳು ರೂ. 2000/- ಆಗಿರುತ್ತದೆ. ಯೋಜನೆಯ ಅವಧಿ ಒಟ್ಟು 24 ತಿಂಗಳುಗಳು ಮಾತ್ರ.


ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ, ಕಡ್ಡಾಯ ನಿವೃತ್ತಿ ಯಾ ಸ್ವ-ಇಚ್ಚಾ ನಿವೃತ್ತಿ ಪಡೆದ ನಂತರ ವಕೀಲ ವೃತ್ತಿ ನಡೆಸುವ ಕಾನೂನು ಪದವೀಧರರಿಗೆ ಅನ್ವಯವಾಗುವುದಿಲ್ಲ.


ಹೆಚ್ಚಿನ ವಿವರಗಳಿಗೆ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಅಥವಾ ವಕೀಲರ ಸಂಘಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.


Ads on article

Advertise in articles 1

advertising articles 2

Advertise under the article